ಸಿಲಿಕಾನ್ ಸಿಟಿ ತಂಪೆರೆದ ವರುಣ
ಮಳೆಯ ಮುನ್ಸೂಚನೆ ಎಂಬಂತೆ ಬೆಂಗಳೂರಿನಲ್ಲಿ ವರುಣಾ ಆಟ ಸುರುವಾಗಿದ್ದು, ಬೆಂಗಳೂರಿನಲ್ಲಿ ಭಾನುವಾರ ಸಂಜೆ ತುಂತುರು ಮಳೆಯಾಗಿದೆ. 
ಇತರೆ

ಫೋಟೋ ಕ್ಲಿಕ್ - ಫೆಬ್ರವರಿ 2015

ಚಾಲುಕ್ಯೋತ್ಸವ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಬಾಗಲಕೋಟೆಯ ಬಾದಾಮಿಯಲ್ಲಿ ಆಯೋಜಿಸಿದ್ದ ಚಾಲುಕ್ಯ ಉತ್ಸವದಲ್ಲಿ ಶುಕ್ರವಾರ ಪಾಲ್ಗೊಂಡಿದ್ದ ಜನಸ್ತೋಮ.
ರಾಜ್ಯದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನ ಕ್ರಿಶ್ ಆಸ್ಪತ್ರೆ ಬೈಕ್ ಆಂಬುಲೆನ್ಸ್ ಸೇವೆ ಆರಂಭಿಸಿದ್ದು, ಆಸ್ಪತ್ರೆ ಆವರಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಲಾಲ್ ರುಖುಮ್ ಪಚಾವೋ ಅವರು ಎರಡು ಬೈಕ್ ಆಂಬುಲೆನ್ಸ್‌ಗಳಿಗೆ ಚಾಲನೆ ನೀಡಿದರು.
ಬಜೆಟ್ ಅಧಿವೇಶನದ ಮೊದಲ ದಿನವಾದ ಸೋಮವಾರ ಸಂಸತ್‌ನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ಬಳಿಕ ರಾಷ್ಟ್ರಪತಿ ಭವನಕ್ಕೆ ತೆರಳುತ್ತಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ.
ಅಣ್ಣಾ ಹೋರಾಟಕ್ಕೆ ಕೇಜ್ರಿವಾಲ್ ಬೆಂಬಲ: ಭೂಸ್ವಾಧೀನ ತಿದ್ದುಪಡಿ ಮಸೂದೆಗೆ ಸುಗ್ರೀವಾಜ್ಞೆ ತಂದಿರುವುದನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನಡೆಸುತ್ತಿರುವ ಹೋರಾಟಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೆಂಬಲ ಸೂಚಿಸಿ, ವೇದಿಕೆ ಹಂಚಿಕೆಕೊಂಡರು.
ತಮ್ಮ ಚೊಚ್ಚಲ ಬಜೆಟ್ ಮಂಡಿಸುವುದಕ್ಕಾಗಿ ಗುರುವಾರ ಸಂಸತ್‌ಗೆ ಆಗಮಿಸಿದ ಕೇಂದ್ರ ರೇಲ್ವೆ ಸಚಿವ ಸುರೇಶ್ ಪ್ರಭು ಅವರನ್ನು ಸುತ್ತುವರಿದಿರುವ ಮಾಧ್ಯಮ ಪ್ರತಿನಿಧಿಗಳು.
ಹೊಷಂಗಬಾದ್‌ನಲ್ಲಿ ಜೀಲ್ ಮಹೋತ್ಸವ ವೇಳೆ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ರಚಿಸಿದ 'ಸ್ವಚ್ಛ ನರ್ಮದಾ, ಪವಿತ್ರ ನರ್ಮದಾ' ಎಂಬ ಸಂದೇಶವಿರುವ ಸುಂದರ ಕಲಾಕೃತಿ.
ಮುಂಬೈನ ಥಾಣೆಯಲ್ಲಿ ಶನಿವಾರ ನಡೆದ ರಸ್ತೆ ಸಂಚಾರ ನಿಯಮಗಳ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಮಿತಾಭ್ ಬಚ್ಚನ್.
ಅಸ್ಸಾಂ ಅಂತಾರಾಷ್ಟ್ರೀಯ ಉತ್ಸವದಲ್ಲಿ ಗುರುವಾರ ಥಾಯ್ಲೆಂಡ್ ಕಲಾವಿದರ ನೃತ್ಯ ಪ್ರದರ್ಶನ ಮನಸೆಳೆಯಿತು.
ಸುಖೋಯ್ ಯುದ್ಧ ವಿಮಾನ ಚಾಲನೆ ಮಾಡಿದ ಕೇಂದ್ರ ಸಚಿವ: ಏರೋ ಇಂಡಿಯಾ ನಡೆಯುತ್ತಿರುವ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಗುರುವಾರ ಸುಖೋಯ್ ಯುದ್ಧ ವಿಮಾನದ ಕಾಕ್‌ಪಿಟ್‌ನಲ್ಲಿ ವಿಂಗ್ ಕಮಾಂಡರ್ ಜತೆ ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ.
ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಬುಧವಾರ ನಡೆದ ಏರೋ ಇಂಡಿಯಾ ಸಮಾರಂಭದ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಪಕ್ಕದ ಕುರ್ಚಿಗೆ ಆಹ್ವಾನಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ.
ದೆಹಲಿಯಲ್ಲಿ ನಡೆದ ತಮ್ಮ ಮುಂದಿನ ಚಿತ್ರ 'ಬದ್ಲಾಪುರ್‌' ಪ್ರಚಾರ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ವರುಣ್ ಧವನ್ ಹಾಗೂ ನಟಿ ಯಾಮಿ ಗೌತಮ್ ಕಾಣಿಸಿಕೊಂಡಿದ್ದು ಹೀಗೆ.
ಯೋಗ ನಮನ: ರಾಷ್ಟ್ರಪತಿ ಭವನದ ನಾರ್ತ್ ಬ್ಲಾಕ್‌ನಲ್ಲಿ ಸೋಮವಾರ ಕರ್ನಾಟಕದ ಶಾಲೆಯೊಂದರ ಅಂಧ ವಿದ್ಯಾರ್ಥಿಗಳು ಯೋಗ ಪ್ರದರ್ಶನ ಮಾಡಿ ಗಮನ ಸೆಳೆದರು.
ನೃತ್ಯ ವೈಭವ... ಮುಧೋಳದಲ್ಲಿ ನಡೆಯುತ್ತಿರುವ ರನ್ನ ವೈಭವದಲ್ಲಿ ಭಾನುವಾರ ಸಂಜೆ ಶಾಸ್ತ್ರೀಯ ನೃತ್ಯ ಪ್ರದರ್ಶನ ಜನಮನ ಸೂರೆಗೊಂಡಿತು.
ಪ್ರೇಮದ ಕಾಣಿಕೆ: ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ ಸೆಂಟ್ರಲ್ ಬಾಗ್ದಾದ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರೀಯತಮೆಗಾಗಿ ಗಿಫ್ಟ್ ಕೊಂಡೊಯ್ಯುತ್ತಿರುವುದು.
ಜನ ಪ್ರವಾಹ... ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕೆರ್ತಯರು ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಗುರುವಾರ ನಡೆಸಿದ ಪ್ರತಿಭಟನಾ ರ್ಯಾಲಿ ವೇಳೆ ಬಹುಮಹಡಿ ಕಟ್ಟಡವೊಂದರಿಂದ ಕಂಡು ಬಂದ ದೃಶ್ಯ.
ನಿಘಂಟು ತಜ್ಞ ಪ್ರೊ. ವೆಂಕಟಸುಬ್ಬಯ್ಯನವರಿಗೆ ಬೆಂಗಳೂರಿನ ಅವರ ನಿವಾಸದಲ್ಲಿ ಬುಧವಾರ 2014ನೇ ಸಾಲಿನ ಪಂಪ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸರ್ಕಾರದ ಪರವಾಗಿ ಸಚಿವರಾದ ಆರ್.ವಿ.ದೇಶಪಾಂಡೆ, ಉಮಾಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು.
ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯ ಅವರ 107ನೇ ಜನ್ಮ ದಿನಾಚರಣೆ ಅಂಗವಾಗಿ ಸಿಎಂ ಸಿದ್ದರಾಮಯ್ಯ, ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಕೆಂಗಲ್ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಂಗಳವಾರ ಪುಷ್ಪನಮನ ಸಲ್ಲಿಸಿದರು.
ಕುಟುಂಬದೊಂದಿಗೆ ಕೇಜ್ರಿವಾಲ್ ಸಂಭ್ರಮ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಕುಟುಂಬದೊಂದಿಗೆ ವಿಜಯೋತ್ಸವ ಆಚರಿಸಿದ್ದು ಹೀಗೆ. ಈ ಚಿತ್ರಗಳನ್ನು ಟ್ವೀಟ್ ಮಾಡಿರುವ ಕೇಜ್ರಿವಾಲ್ ಪತ್ನಿ ಸುನಿತಾಗೆ ಧನ್ಯವಾದ ಹೇಳಿದ
ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ: ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪಕ್ಷದ ಐತಿಹಾಸಿಕ ಗೆಲುವಿನ ವಿಜಯೋತ್ಸವ ಆಚರಿಸಿದ್ದು ಹೀಗೆ- ಚಿತ್ರ ಕೃಪೆ, ಟ್ವಿಟರ್
ಬಾನಲ್ಲಿ ಗಾಳಿಪಟದ ಚಿತ್ತಾರ: ಕೇರಳದ ಕಲ್ಲಿಕೋಟೆಯಲ್ಲಿ ಭಾನುವಾರ ನಡೆದ 'ದುಬೈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ'ದ ವೇಳೆ ಬಾನಲ್ಲಿ ಚಿತ್ತಾರ ಮೂಡಿಸಿದ ಗಾಳಿಪಟವೊಂದನ್ನು ಕುತೂಹಲದಿಂದ ವೀಕ್ಷಿಸುತ್ತಿರುವ ಮಂದಿ.
ಸೊಂಡಿಲಿಗೇ ಬಾಯಿ! ದಕ್ಷಿಣ ಆಫ್ರಿಕಾದ ಸಾಬಿ ಸ್ಯಾಂಡ್ಸ್ ಗೇಮ್ ರಕ್ಷಿತಾರಣ್ಯದಲ್ಲಿ ದಣಿವಾರಿಸಿಕೊಳ್ಳಲೆಂದು ನೀರಿಗಿಳಿದ ಆನೆಮರಿಯೊಂದರ ಸೊಂಡಿಲನ್ನೇ ಮೊಸಳೆಯೊಂದು ಕಚ್ಚಿ ಹಿಡಿದ ಕ್ಷಣ. ಈ ವೇಳೆ ಜೀವ ಉಳಿಸಿಕೊಳ್ಳಲು ಆನೆ ನಡೆಸಿದ ಒದ್ದಾಟ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ.
ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧಾ ಅವರು ತಮ್ಮ ಎರಡು ವರ್ಷದ ಮಗುವಿನೊಂದಿಗೆ ಬುಧವಾರ ವಿಧಾನಸೌಧದಲ್ಲಿ ಕಾಣಿಸಿಕೊಂಡಿದ್ದು ಹೀಗೆ. ಈ ವೇಳೆ ವಿಧಾನ ಪರಿಷತ್ ಸದಸ್ಯೆ ಜಯಮಾಲಾ ಸೇರಿದಂತೆ ಇತರರು ಇದ್ದರು. ಚಿತ್ರ-ನಾಗರಾಜ್ ಗಡೆಕಲ್
ವಿಧಾನಸಭೆಯಲ್ಲಿ ಮಂಗಳವಾರ ಕಂಡುಬಂದ ಜನಪ್ರತಿನಿಧಿಗಳ ಭಾವಭಂಗಿ...
ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ವಜುಭಾಯಿ ವಾಲಾ ಅವರು ಸೋಮವಾರ ಅಶ್ವದಳದೊಂದಿಗೆ ವಿಧಾನಸೌಧಕ್ಕೆ ಆಗಮಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ