ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸಿದ್ದ ಸಂದರ್ಭದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ತಮ್ಮ ಜುಹು ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ತಮ್ಮ ಹೆಗಲಿನ ಮೇಲೆ ಇಳಿಬಿಟ್ಟು ತಮ್ಮ ಅಭಿಮಾನಿಗಳತ್ತ ಕೈಬೀಸಿದ್ದು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು.
ಬಾಲಿವುಡ್ ಹಾಟ್ ಬ್ಯೂಟಿ ಮಲ್ಲಿಕಾ ಶೆರಾವತ್ ತಮ್ಮ ಡರ್ಟಿ ಪಾಲಿಟಿಕ್ಸ್ ಚಿತ್ರದ ಪೋಸ್ಟರ್ ವೊಂದರಲ್ಲಿ ನಗ್ನ ದೇಹಕ್ಕೆ ತ್ರಿವರ್ಣ ಬಣ್ಣದ ಸೀರೆಯನ್ನು ಮುಚ್ಚಿದ್ದ ಚಿತ್ರ ವಿವಾಡಕ್ಕೀಡಾಗಿತ್ತು.
ಕಾರ್ಯಕ್ರಮವೊಂದರಲ್ಲಿ ತ್ರಿವರ್ಣ ಧ್ವಜದ ಮುಂದೆ ತಮ್ಮ ಕಾಲುಗಳನ್ನು ಇಟ್ಟಿದ್ದ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ವಿರುದ್ಧ 2008ರಲ್ಲಿ ಪ್ರಕರಣ ದಾಖಲಾಗಿತ್ತು.
2010ರ ಮಾರ್ಚ್ ನಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ತ್ರಿವರ್ಣ ಧ್ವಜ ಬಣ್ಣದ ಕೇಕ್ ಕತ್ತರಿಸಿದ್ದು ವಿವಾದಕ್ಕೆ ಗುರಿಯಾಗಿತ್ತು.
ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಲಾಗಿದ್ದ ವಿಡಿಯೋ ಅನ್ವಯ ಶಾರುಖ್ ಖಾನ್ ರಾಷ್ಟ್ರಧ್ವಜಕ್ಕೆ ಅಪಮಾನ ವೆಸಗಿದ್ದಾರೆ ಎಂದು ಶಾರುಖ್ ವಿರುದ್ಧ ದೂರು ದಾಖಲಾಗಿತ್ತು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ದೆಹಲಿಯ ರಾಜ್‍ಪಥ್ ದಲ್ಲಿ ಯೋಗಾಸನ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತ್ರಿವರ್ಣ ಬಣ್ಣದ ವೇಲ್ ನಿಂದ ಮುಖ ಹೊರಸಿಕೊಂಡು ರಾಷ್ಟ್ರಧ್ವಜಕ್ಕೆ ಅಪಮಾನ ವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.
" attribution="">
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics