ಸವಾರರ ಸೆಲ್ಫಿ ಸಂಭ್ರಮ... ಮಹಿಳಾ ಬೈಕ್ ಸವಾರರ ತಂಡವೊಂದು ಮಂಗಳವಾರ ವಿಧಾನಸೌಧದ ಮುಂದೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದ್ದು ಹೀಗೆ. ಹಿಮಾಲಯನ್ ಹೈ ಸೀಸನ್ 3ಗೆ ದೇಶದ ವಿವಿಧ ಭಾಗಗಳಿಂದ 12 ಮಹಿಳಾ ಸವಾರರು ಆಯ್ಕೆಯಾಗಿದ್ದಾರೆ.
ದಲಿತರೊಂದಿಗೆ ಬಿಎಸ್ ವೈ ಊಟ... ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ದಲಿತ ಕುಟುಂಬದೊಂದಿಗೆ ಊಟ ಮಾಡಿದರು.
ಗಣೇಶ ಬಂದ.... ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಾಗಪುರದಲ್ಲಿ ಗುರುವಾರ ವಿಘ್ನ ನಿವಾರಕ ವಿನಾಯಕ ಮೂರ್ತಿಯನ್ನು ಪೆಂಡಾಲ್ ಗೆ ಕೊಂಡೊಯ್ಯುತ್ತಿರುವುದು.
Advertisement
Advertisement
ಪರಿಸರ ಸ್ನೇಹಿ ಗಣಪ... ಬೆಂಗಳೂರಿನ ಜಯನಗರದಲ್ಲಿ ಶನಿವಾರ ಬಾಂಧವ ಸಂಸ್ಥೆ ಆಯೋಜಿಸಿದ್ದ ಪರಿಸರ ಸ್ನೇಹಿ ಗಣೇಶ ಮೂರ್ತಿ ಜಾಗೃತಿ ರ್ಯಾಲಿಯಲ್ಲಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕೃಷ್ಣೆಗೆ ಸಿಎಂ ಬಾಗಿನ... ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಜಲಾಶಯ ತುಂಬಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದರು. ಈ ವೇಳೆ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಸಹ ಇದ್ದರು.
ಛೀ ಕಳ್ಳ... ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಲಕನನ್ನು ಮುದ್ದು ಮಾಡಿದ್ದು ಹೀಗೆ.
ಸ್ವಾತಂತ್ರ್ಯೋತ್ಸವ ಸಂಭ್ರಮ... 70ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಚೆನ್ನೈನ ಮರಿನಾ ಬೀಚ್ ನಲ್ಲಿ ಬಾಲಕರು ಭಾರತದ ತ್ರಿವರ್ಣ ಧ್ವಜದೊಂದಿಗೆ ಸಂಭ್ರಮಿಸಿದ್ದು ಹೀಗೆ.
ಶಾ...ಗೆ ಸ್ವಾಗತ... ಮೂರು ದಿನಗಳ ಕರ್ನಾಟಕ ಭೇಟಿಗಾಗಿ ಶನಿವಾರ ಬೆಂಗಳೂರಿಗೆ ಆಗಮಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಕಲಾವಿದರು ತಮ್ಮ ಕಲಾ ಪ್ರದರ್ಶನದ ಮೂಲಕ ಸ್ವಾಗತಿಸಿದ್ದು ಹೀಗೆ.
ಶಾಗೆ ಗೆಲುವಿನ ಸಿಹಿ.... ದೆಹಲಿಯಲ್ಲಿ ಗುರುವಾರ ನಡೆದ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಸಿಹಿ ತಿನಿಸುವ ಮೂಲಕ ಅಭಿನಂದಿಸಿದರು.
ಸಂಸತ್ ಪ್ರತಿಬಿಂಬ... ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಭಾರಿ ಮಳೆಯಾಗಿದ್ದು, ಮಳೆ ನೀರಿನಲ್ಲಿ ಸಂಸತ್ ಭವನದ ಪ್ರತಿಬಿಂಬ ಕಾಣಿಸಿದ್ದು ಹೀಗೆ.
ನಿಜಲಿಂಗಪ್ಪನವರಿಗೆ ಪುಷ್ಪ ನಮನ.. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಂ.ವಿ.ರಾಜಶೇಖರನ್ ಅವರು ಮಂಗಳವಾರ ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರ 17ನೇ ಪುಣ್ಯತಿಥಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಯೋಧರಿಗೆ ರಕ್ಷಾ ಬಂಧನ... ರಕ್ಷಾ ಬಂಧನ ಹಬ್ಬದ ಅಂಗವಾಗಿ ಸೋಮವಾರ ಭುವನೇಶ್ವರದಲ್ಲಿ ಮಹಿಳೆಯರು ಭಾರತೀಯ ಸೇನೆಯ ಯೋಧರಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದು ಹೀಗೆ.
ರಾಷ್ಟ್ರಪತಿಗೆ ರಕ್ಷಾ ಬಂಧನ... ಮಿರ್ಜಾಪುರದಲ್ಲಿ ಗುರುವಾರ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಪತಿ ರಾಮ್ ನಾಥ್ ಕೊವಿಂದ್ ಅವರ ಭಾವಚಿತ್ರವಿರುವ ಅತಿ ದೊಡ್ಡ ರಾಖಿ ಪ್ರದರ್ಶಿಸಿದ್ದು ಹೀಗೆ.
ನಮ್ಮ ಅಪ್ಪಾಜಿ ಕ್ಯಾಂಟೀನ್... ಬೆಂಗಳೂರಿನ ಹನುಮಂತನಗರದಲ್ಲಿ ಜೆಡಿಎಸ್ ಎಂಎಲ್ ಸಿ ಟಿ ಎ ಶರವಣ ಅವರು ಸ್ಥಾಪಿಸಿರುವ ನಮ್ಮ ಅಪ್ಪಾಜಿ ಕ್ಯಾಂಟೀನ್ ಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಬುಧವಾರ ಚಾಲನೆ ನೀಡಿದರು. ಇಲ್ಲಿ 5 ರು.ಗೆ ತಿಂಡಿ ಹಾಗೂ 10 ರು.ಗೆ ಊಟ ದೊರೆಯಲಿದೆ.
ಲಾಲ್ ಬಾಗ್ ನಲ್ಲಿ ಕುವೆಂಪು ಕವಿಶೈಲ... ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ರಾಷ್ಟ್ರಕವಿ ಕುವೆಂಪು ಅವರ ಮನೆ ಕವಿಶೈಲದ ಮಾದರಿ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.
ಮೈಯನ್ಮಾರ್ ನಿಯೋಗ... ಮಂಗಳವಾರ ದೆಹಲಿಯ ಸಂಸತ್ ಭವನಕ್ಕೆ ಭೇಟಿ ನೀಡಿದ ಮಯನ್ಮಾರ್ ನ ನಿಯೋಗ ಮಾಧ್ಯಮಕ್ಕೆ ಪೋಸ್ ಕೊಟ್ಟಿದೆ ಹೀಗೆ.
Subscribe and Receive exclusive content and updates on your favorite topics
Advertisement
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.