ಮುಂದುವರೆದ ಖಾಸಗಿ ದರ್ಬಾರ್.... ಮೈಸೂರಿನಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸೋಮವಾರ ತಮ್ಮ ಖಾಸಗಿ ದರ್ಬಾರ್ ಮುಂದುವರೆಸಿದರು. ರಾಜಮಾತೆ ಪ್ರಮೋದಾದೇವಿ ತಾಯಿ ನಿಧನದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ವಿಜಯದಶಮಿ ಉತ್ಸವವನ್ನು ಮುಂದೂಡಲಾಗಿತ್ತು.
ಆರ್ಟ್ ಆಫ್ ಲಿವಿಂಗ್ ನಲ್ಲಿ ನವರಾತ್ರಿ.... ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ನ ವೇದ ವಿಜ್ಞಾನ ಮಹಾ ವಿದ್ಯಾಪೀಠದಲ್ಲಿ ನಡೆದ ನವರಾತ್ರಿ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಭಾಗವಹಿಸಿದ್ದರು.
Advertisement
Advertisement
ಪಾರಂಪರಿಕ ಟಾಂಗಾ ಸವಾರಿ..... ಅರಮನೆ ನಗರಿ ಮೈಸೂರಿನ ಪಾರಂಪರಿಕ ಕಟ್ಟಡಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಶನಿವಾರ ನಗರದಲ್ಲಿ ಪಾರಂಪರಿಕ ಟಾಂಗಾ ಸವಾರಿಗೆ ಚಾಲನೆ ನೀಡಲಾಯಿತು.
ವಾಹ್ ತಾಜ್ ಮಹಲ್..... ಹಾಲಿವುಡ್ ನಟ ವಿಲ್ ಸ್ಮಿತ್ ಅವರು ಬುಧವಾರ ಆಗ್ರಾದ ತಾಜ್ ಮಹಲ್ ಗೆ ಭೇಟಿ ನೀಡಿ ಪೋಸ್ ಕೊಟ್ಟಿದ್ದು ಹೀಗೆ.
ಮೈಸೂರಿನಲ್ಲಿ ಕಾರ್ ರೇಸ್ ರೋಮಾಂಚನ... ಮೈಸೂರು ದಸರಾ ಉತ್ಸವದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಸರ್ವೋ ಮೈಸೂರು ದಸರಾ ಗ್ರಾವೆಲ್ ಫೆಸ್ಟ್ ಆಟೋಕ್ರಾಸ್ ರೇಸ್ ಜನರ ಗಮನ ಸಳೆಯಿತು.
ಗಾರ್ಬಾ ತಾಲೀಮು... ನವರಾತ್ರಿ ಹಬ್ಬದ ಪ್ರಯುಕ್ತ ಅಹಮದಾಬಾದ್ ನಲ್ಲಿ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಶುಕ್ರವಾರ ಗಾರ್ಬಾ ನೃತ್ಯದ ತಾಲೀಮು ನಡೆಸಿದರು.
ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಹಾಗೂ ಅವರ ಭಾವಿ ಪತಿ, ಅಮೆರಿಕದ ಗಾಯಕ ನಿಕ್ ಜೋನಸ್ ಅವರು ಮಂಗಳವಾರ ಜೋಧ್ ಪುರದ ಮೆಹ್ರಾನಗರ ಕೋಟೆಗೆ ಭೇಟಿ ನೀಡಿದರು.
ಗಾಂಧಿ ಬಂದ್ರು..... ಗಾಂಧಿ ಜಯಂತಿ ಪ್ರಯುಕ್ತ ಸೋಮವಾರ ಚೆನ್ನೈನ ಖಾಸಗಿ ಶಾಲೆಯಲ್ಲಿ ಮಹಾತ್ಮ ಗಾಂಧಿ ವೇಷಧಾರಿ ಮಕ್ಕಳು.
ಚೆನ್ನೈನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ವಿದ್ಯಾರ್ಥಿನಿಯರು ತಮ್ಮ ಮುಖದಲ್ಲಿ ಮಹಾತ್ಮ ಗಾಂಧಿ ಚಿತ್ರ ಬಿಡಿಸಿಕೊಂಡಿದ್ದು ಹೀಗೆ.
ಅಹಮದಾಬಾದ್ ನಲ್ಲಿ ಸೋಮವಾರ ಗಾಂಧಿ ಜಯಂತಿ ಪ್ರಯುಕ್ತ ತಮ್ಮ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಶಿಕ್ಷಕಿಯೊಂದಿಗೆ ತೆರಳುತ್ತಿರುವ ಮಹಾತ್ಮ ಗಾಂಧಿ ಹಾಗೂ ಇತರೆ ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಿ ಮಕ್ಕಳು.
Subscribe and Receive exclusive content and updates on your favorite topics
Advertisement
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.