ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಘಟನೆ ಖಂಡಿಸಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಪೊಲೀಸರೊಂದಿಗಿನ ಜಟಾಪಟಿ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೆಳಗೆ ಬಿದ್ದಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದ್ದು ಈ ವೇಳೆ ರಾಹುಲ್ ಗಾಂಧಿ ಎಡವಿ ಕೆಳಗೆ ಬಿದ್ದಿದ್ದಾರೆ.ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಹತ್ರಾಸ್ ಸಾಮೂಹಿಕ ಅತ್ಯಾಚಾರದಲ್ಲಿ ಮೃತಪಟ್ಟಿದ್ದ ಯುವತಿಯ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.ರಾಹುಲ್ ಗಾಂಧಿರಾಹುಲ್ ಗಾಂಧಿರಾಹುಲ್ ಗಾಂಧಿರಾಹುಲ್ ಗಾಂಧಿ