ತಮಿಳು ನಾಡಿನ ಕೂನೂರು ಬಳಿ ಅಪಘಾತಕ್ಕೀಡಾಗಿ ಮೃತಪಟ್ಟ ಭಾರತದ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಇತರ 11 ಮಂದಿ ಸೇನಾಧಿಕಾರಿಗಳ ಪಾರ್ಥಿವ ಶರೀರವನ್ನು ದೆಹಲಿಗೆ ಕರೆತಂದು ಪಲಾಮಾ ವಾಯುನೆಲೆಯಲ್ಲಿ ಇರಿಸಲಾಯಿತು. ಗಣ್ಯರು ನಿನ್ನೆ ಪಾರ್ಥಿವ ಶರೀರಕ್ಕೆ ಅಂತಿಮ ನಮನ
ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿನ್ನೆ ದೆಹಲಿಯ ಪಲಾಮ ವಾಯುನೆಲೆಯಲ್ಲಿ ಜನರಲ್ ರಾವತ್, ಅವರ ಪತ್ನಿ ಹಾಗೂ ಇತರ 11 ಮಂದಿ ಸೇನಾಧಿಕಾರಿಗಳಿಗೆ ಅಂತಿಮ ನಮನ ಸಲ್ಲಿಸಿ, ದೇಶ ಸೇನಾಧಿಕಾರಿಗಳ ಕೊಡುಗೆಯನ್ನು, ದೇಶಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದರು.ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ದೆಹಲಿ ಕಂಟೋನ್ಮೆಂಟ್ ನ ಬ್ರಾರ್ ಸ್ಕ್ವಾರ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.ಜನರಲ್ ಬಿಪಿನ್ ರಾವತ್ ಅವರ ಮಕ್ಕಳಿಗೆ ಸಾಂತ್ವನ ಹೇಳಿದ ಪ್ರಧಾನಿ ಮೋದಿಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ದೆಹಲಿ ಕಂಟೋನ್ಮೆಂಟ್ ನ ಬ್ರಾರ್ ಸ್ಕ್ವಾರ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಬಿಪಿನ್ ರಾವತ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಪ್ರಧಾನಿ ಮೋದಿರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಂತಿಮ ನಮನ ಸಲ್ಲಿಸಿದರು.ಭಾರತೀಯ ಸೇನಾಪಡೆ ಮುಖ್ಯಸ್ಥ ಜನರಲ್ ಎಂ ಎಂ ನರವಣೆಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಅವರು ಸಹ ಅಂತಿಮ ನಮನ ಸಲ್ಲಿಸಿದರು.ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಅವರು ಅಂತಿಮ ನಮನ ಸಲ್ಲಿಸಿದರು.ಭೂತಾನ್ ದೊರೆಯಿಂದ ಜ.ಬಿಪಿನ್ ರಾವತ್ ಮತ್ತು ಅವರ ಪತ್ನಿಯವರ ಪಾರ್ಥಿವ ಶರೀರಕ್ಕೆ ಅಂತಿಮ ನಮನಇಂದು ಬೆಳಗ್ಗೆ ಅಂತ್ಯಕ್ರಿಯೆಯಾದ ಬ್ರಿಗೇಡಿಯರ್ ಲಖ್ವಿಂದರ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಅವರ ಪತ್ನಿಯಿಂದ ಅಂತಿಮ ನಮನತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಪತನಕ್ಕೀಡಾದ ನಂತರದ ದೃಶ್ಯದೆಹಲಿಯ ಪನಾಮಾ ವಾಯುನೆಲೆಯಲ್ಲಿ ಸೇನಾಧಿಕಾರಿಗಳ ಪಾರ್ಥಿವ ಶರೀರವನ್ನಿಡಲಾಗಿದ್ದು ಇಂದು ಮಧ್ಯಾಹ್ನದಿಂದ ದೆಹಲಿಯ ರಾಜಪಥದಲ್ಲಿ ಮೆರವಣಿಗೆ ಸಾಗಲಿದೆಪನಾಮಾ ವಾಯುನೆಲೆಯಲ್ಲಿ ಇಟ್ಟಿರುವ ಸೇನಾಧಿಕಾರಿಗಳ ಪಾರ್ಥಿವ ಶರೀರಗಳುಜನರಲ್ ಬಿಪಿನ್ ರಾವತ್Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos