ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಜಹ್ಹಾದ್ ಮತ್ತು ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಜಿಯಾ ಮಗು ಹುಟ್ಟಿದ ಸುವರ್ಣ ಸಮಯವನ್ನು ಸಂಭ್ರಮಿಸಿದ್ದಾರೆ.ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ ಎಂದು ಜಹ್ಹಾದ್ ಸಂಗಾತಿ ಜಿಯಾ ಪಾವಲ್ ತಿಳಿಸಿದ್ದಾರೆ.ಮಗುವಿಗೆ ಜನ್ಮ ನೀಡಿದ ಜಹ್ಹಾದ್ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಜಿಯಾ ಪಾವಲ್ ತಿಳಿಸಿದ್ದು ಮಗುವಿನ ಲಿಂಗ ಗುರುತನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.ಹಾಲಿನ ಬ್ಯಾಂಕ್ ಮೂಲಕ ಮಗುವಿಗೆ ಹಾಲುಣಿಸಲು ನಿರ್ಧರಿಸಿದ್ದಾರೆ. ಜಿಯಾ ಓರ್ವ ನರ್ತಕಿಯಾಗಿದ್ದು ಜಹ್ಹಾದ್ ಖಾಸಗಿ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿದ್ದಾರೆ.ತೃತೀಯಲಿಂಗಿ ದಂಪತಿತೃತೀಯಲಿಂಗಿ ದಂಪತಿ