ದೇಶ

ಏರೋ ಇಂಡಿಯಾ 2023ದಲ್ಲಿ ಕಣ್ಮನ ಸೆಳೆದ ಲೋಹದ ಹಕ್ಕಿಗಳು

Srinivas Rao BV
ಮುಂದಿನ 5 ದಿನಗಳ ಕಾಲ ಸಿಲಿಕಾನ್ ಸಿಟಿಯ ನಭದಲ್ಲಿ ಲೋಹದ ಹಕ್ಕಿಗಳ ಕಲರವ ಜೋರಾಗಿರಲಿದೆ.
ಮುಂದಿನ 5 ದಿನಗಳ ಕಾಲ ಸಿಲಿಕಾನ್ ಸಿಟಿಯ ನಭದಲ್ಲಿ ಲೋಹದ ಹಕ್ಕಿಗಳ ಕಲರವ ಜೋರಾಗಿರಲಿದೆ.
ಆವೃತ್ತಿಯಿಂದ ಆವೃತ್ತಿಗೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿರುವ ಏರೋ ಇಂಡಿಯಾ ಈ ಬಾರಿಯೂ ತನ್ನ ಪ್ರದರ್ಶನ ವ್ಯಾಪ್ತಿಯನ್ನು ಶೇ.3ರಷ್ಟು ವಿಸ್ತಾರಗೊಳಿಸಿಕೊಂಡಿದೆ.
ಕಳೆದ ವರ್ಷಕ್ಕಿಂತ ರಕ್ಷಣಾ ಕ್ಷೇತ್ರಕ್ಕೆ ಹೆಚ್ಚು ಹೂಡಿಕೆ ಬರುವ ನಿರೀಕ್ಷೆಗಳಿವೆ.
2021ರಲ್ಲಿ ನಡೆದ 13ನೇ ಆವೃತ್ತಿಯ ವೈಮಾನಿಕ ಪ್ರದರ್ಶನದಲ್ಲಿ 600 ಮಂದಿ ಪ್ರದರ್ಶಕರು ಭಾಗವಹಿಸಿದ್ದರು. ಈ ಸಂಖ್ಯೆ ಪ್ರಸಕ್ತ ವೈಮಾನಿಕ ಪ್ರದರ್ಶನದಲ್ಲಿ 809ಕ್ಕೆ ಹೆಚ್ಚಳವಾಗಿದೆ.
98 ರಾಷ್ಟ್ರಗಳು ತಮ್ಮ ಭಾಗವಹಿಸುವಿಕೆಯನ್ನು ಖಚಿತಪಡಿಸಿವೆ.
ಒಟ್ಟು 251 ಒಡಂಬಡಿಕೆ ಸಿದ್ಧಗೊಂಡಿದ್ದು, ಕಳೆದ ವರ್ಷ 23 ಸಾವಿರ ಚದರ ಮೀಟರ್ ವ್ಯಾಪ್ತಿಗೆ ಸೀಮಿತವಾಗಿದ್ದ ಪ್ರದರ್ಶನ ವ್ಯವಸ್ಥೆ ಈ ಬಾರಿ 35,000 ಚದರ ಮೀಟರ್ ವ್ಯಾಪ್ತಿಗೆ ವಿಸ್ತರಿಸಿದೆ.
ಈ ಬಾರಿ ಸಾರಂಗ್, ಸೂರ್ಯಕಿರಣ್ ವೈಮಾನಿಕ ಪ್ರದರ್ಶನ ತಂಡ, ಸುಖೋಯ್, ರಫೇಲ್, ತೇಜಸ್ ಸೇರಿದಂತೆ ಒಟ್ಟು 67 ವಿಮಾನಗಳು ಪ್ರದರ್ಶನ ನೀಡಲಿವೆ.
ಸ್ವ್ಯಾಟಿಕ್ ಡಿಸ್ ಪ್ಲೇಯಲ್ಲಿ 36 ವಿಮಾನಗಳು ಪ್ರದರ್ಶನಗೊಳ್ಳಲಿವೆ.
ಏರೋ ಇಂಡಿಯಾ ಶೋ ನವ ಭಾರತದ ಶಕ್ತಿಯನ್ನು ತೋರಿಸುತ್ತಿದ್ದು, ಇದು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಭಾರತ ನಿರ್ಮಿತ ಯುದ್ಧ ವಿಮಾನ, ಹೆಲಿಕಾಪ್ಟರ್ ಹಾಗೂ ತಂತ್ರಜ್ಞಾನಗಳ ಪ್ರದರ್ಶನಕ್ಕಾಗಿಯೇ ಪ್ರತ್ಯೇಕವಾಗಿ ಇಂಡಿಯನ್ ಪೆವಿಲಿಯನ್ ನಿರ್ಮಾಣ ಮಾಡಲಾಗಿದೆ.
SCROLL FOR NEXT