ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದು, ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿ, ಮೈಸೂರು- ಕುಶಾಲನಗರ ಹೆದ್ದಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಮಂಡ್ಯಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್ ಶೋ ನಡೆಸಿದರು.ಪ್ರಧಾನಿ ಮೋದಿ ಮಂಡ್ಯದ ಪ್ರವಾಸಿ ಮಂದಿರ ವೃತ್ತದಿಂದ ನಂದಾ ವೃತ್ತದವರೆಗೂ 1.8 ಕಿ.ಮೀ ರೋಡ್ ಶೋ ನಡೆಸಿದರು.ರಸ್ತೆಯ ಬದಿಯಲ್ಲಿ ನೆರೆದಿದ್ದ ಜನಸ್ತೋಮ ಪ್ರಧಾನಿ ಮೋದಿ ಅವರನ್ನು ಪುಷ್ಪವೃಷ್ಟಿ ಮೂಲಕ ಸ್ವಾಗತಿಸಿದರು.ದಶಪಥ ಹೆದ್ದಾರಿ ಉದ್ಘಾಟನೆ ವೇಳೆ ಸಿಎಂ ಬೊಮ್ಮಾಯಿಮೈಸೂರಿನ ಕಾರ್ಯಕ್ರಮ ಮುಕ್ತಾಯಗೊಳಿಸಿದ ಬಳಿಕ ಪ್ರಧಾನಿ ಮೋದಿ ಧಾರವಾಡದಲ್ಲಿ ನೂತನ ಐಐಟಿ ಕ್ಯಾಂಪಸ್ ಹಾಗೂ ವಿಶ್ವದಲ್ಲಿಯೇ ಅತಿ ದೊಡ್ಡದಾದ ರೈಲು ನಿಲ್ದಾಣವನ್ನು ಉದ್ಘಾಟಿಸಿದರು.ಸಿಎಂ ಬೊಮ್ಮಾಯಿಯಿಂದ ಪ್ರಧಾನಿ ಮೋದಿಗೆ ಸನ್ಮಾನದಶಪಥ ಹೆದ್ದಾರಿ ಉದ್ಘಾಟನೆ ಮಾಡುತ್ತಿರುವ ಪ್ರಧಾನಿ ಮೋದಿಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವರುಕರ್ನಾಟಕದ ಅಭಿವೃದ್ಧಿಗೆ ಕೆಲಸ ಮಾಡುವ ಮೂಲಕ ಜನರ ಪ್ರೀತಿಯ ಋಣ ತೀರಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅವರಿಂದ ಪ್ರಧಾನಿ ಮೋದಿಗೆ ಸನ್ಮಾನ