ಹೆಚ್ ಎಎಲ್ ನ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ನಗರಕ್ಕೆ ಬಂದಿದ್ದರು. 
ದೇಶ

ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ - PHOTOS

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿನ HALಗೆ ಭೇಟಿ ನೀಡಿದ ಸಂದರ್ಭದಲ್ಲಿ ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.

ತೇಜಸ್ ಯುದ್ಧ ವಿಮಾನ ಸೇರಿದಂತೆ ಹೆಚ್ ಎಎಲ್‌ನ ಉತ್ಪಾದನಾ ಸೌಲಭ್ಯವನ್ನು ಪ್ರಧಾನಿ ತಮ್ಮ ಭೇಟಿ ವೇಳೆ ಸುಮಾರು 45 ನಿಮಿಷಗಳ ಕಾಲ ಪರಿಶೀಲನೆ ನಡೆಸಿದರು.
ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಬಳಿಕ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ನಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದಿಂದಾಗಿ ಸ್ವಾವಲಂಬನೆಯ ಕ್ಷೇತ್ರದಲ್ಲಿ ಜಗತ್ತಿನ ಯಾವ ದೇಶಕ್ಕಿಂತ ನಾವು ಕಡಿಮೆಯಿಲ್ಲ ಎಂದು ನಾನು ಅಪಾರ ಹೆಮ್ಮೆಯಿಂದ ಹೇಳಬಲ್ಲೆ-ಮೋದಿ
ಈ ಅನುಭವ ವಿಸ್ಮಯಕಾರಿಯಾಗಿತ್ತು. ನಮ್ಮ ದೇಶದ ರಕ್ಷಣಾ ಕ್ಷೇತ್ರದಲ್ಲಿ ಸ್ಥಳೀಯ ಉತ್ಪನ್ನಗಳ ಸಾಮರ್ಥ್ಯಗಳಲ್ಲಿ ನನ್ನ ವಿಶ್ವಾಸ ಖಂಡಿತಾ ಹೆಚ್ಚಾಗಿದೆ- ಮೋದಿ
ನಮ್ಮ ರಾಷ್ಟ್ರದ ಸಾಮರ್ಥ್ಯದ ಬಗ್ಗೆ ನನ್ನಲ್ಲಿ ಹೆಮ್ಮೆಯ ಭಾವ ಮತ್ತು ಆಶಾಭಾವನೆ ಹೆಚ್ಚಾಗಿದೆ ಎಂದು ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತೆಮ್ ನವಿ ಪಿಳ್ಳೆಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video

'ಪೋಷಕರು ನನ್ನ ಆ ಖಾಸಗಿ ವಿಡಿಯೋ ನೋಡಿದ್ದರು, ಏರ್‌ಪೋರ್ಟ್‌ನಲ್ಲೇ ಕುಳಿತು ಅತ್ತಿದ್ದೆ: ವೈರಲ್‌ ಪಾರ್ಟಿ ಬಗ್ಗೆ ಅಪೂರ್ವ ಮುಖಿಜಾ! Video