ಸತತ 500 ವರ್ಷಗಳಿಗೂ ಅಧಿಕ ಹೋರಾಟದ ಅಂತಿಮ ಫಲವಾಗಿ ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ.
ಬಾಲರಾಮನ ಪ್ರತಿಷ್ಠಾಪನಾ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರುತ್ತಿದೆ.ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಬರೊಬ್ಬರಿ 7 ಸಾವಿರ ಮಂದಿ ಗಣ್ಯರು ಆಗಮಿಸುತ್ತಿದ್ದಾರೆ.ಈಗಾಗಲೇ ಬಹುತೇಕ ಗಣ್ಯರು ಅಯೋಧ್ಯೆ ತಲುಪಿದ್ದಾರೆ.ಇಡೀ ಕಾರ್ಯಕ್ರಮಕ್ಕೆ ಅಭೂತಪೂರ್ವ ಭದ್ರತೆ ಒದಗಿಸಲಾಗಿದೆ.ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಸೋಮವಾರ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಂತರು ಮತ್ತು ಗಣ್ಯಾತಿಗಣ್ಯರ ಸಮ್ಮುಖದಲ್ಲಿ ನಡೆಯಲಿದೆ.ಕ್ರಿಕೆಟ್ ಜಗತ್ತು, ಚಲನಚಿತ್ರ ಜಗತ್ತು, ಸಂತ ಸಮಾಜ, ರಾಜಕೀಯ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಮತ್ತು ಇತರ ಕ್ಷೇತ್ರಗಳ ವಿಶೇಷ ಅತಿಥಿಗಳನ್ನು ಈ ಭವ್ಯ ಸಮಾರಂಭಕ್ಕೆ ಹಾಜರಾಗಲು ಆಹ್ವಾನಿಸಲಾಗಿದೆ.ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ಬಿಗಿ ಭದ್ರತೆಯ ನಡುವೆ ಬಾಲರಾಮ (ರಾಮಲಲ್ಲಾ) ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭ ಮಧ್ಯಾಹ್ನ 12:30ಕ್ಕೆ ಆರಂಭವಾಗಲಿದೆ.‘ಪ್ರಾಣ ಪ್ರತಿಷ್ಠಾ’ ಸಮಾರಂಭವು ‘ಮಂಗಲಧ್ವನಿ’ ಎಂಬ ಬೆರಗುಗೊಳಿಸುವ ಸಂಗೀತ ಕಾರ್ಯಕ್ರಮದ ಮೂಲಕ ಗುರುತಿಸಲ್ಪಡುತ್ತದೆ.ಪ್ರಪಂಚದಾದ್ಯಂತದ ಹಿಂದೂ ಸಮುದಾಯದ ಜನರು ಈ ಐತಿಹಾಸಿಕ ಸಂದರ್ಭಕ್ಕಾಗಿ ತಮ್ಮ ಅತೀವ ಉತ್ಸಾಹ ಮತ್ತು ಗೌರವವನ್ನು ಪ್ರದರ್ಶಿಸುವ ಭವ್ಯವಾದ ಆಚರಣೆಗಳಿಗೆ ಸಜ್ಜಾಗುತ್ತಿದ್ದಾರೆ.ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ-ಪ್ರತಿಷ್ಠಾಪನಾ ಸಮಾರಂಭದ ವೈದಿಕ ಆಚರಣೆಗಳು ಜನವರಿ 16 ರಂದು ಮುಖ್ಯ ಸಮಾರಂಭದ ಒಂದು ವಾರದ ಮೊದಲು ಪ್ರಾರಂಭವಾಗಿತ್ತು.ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಶ್ರೀರಾಮ ಲಲ್ಲಾ ವಿಗ್ರಹವನ್ನು ಗುರುವಾರ ದೇವಾಲಯದ ಗರ್ಭಗುಡಿಯಲ್ಲಿ ಇರಿಸಲಾಗಿದೆ.ಇದೇ ವಿಗ್ರಹಕ್ಕೆ ಇಂದು ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ಪ್ರತಿಷ್ಠಾಪನೆ ಸಮಾರಂಭದಲ್ಲಿ ಗರ್ಭಗುಡಿಯಲ್ಲಿ ಪವಿತ್ರ ಬಟ್ಟೆಯಿಂದ ಮುಚ್ಚಲ್ಪಟ್ಟ ವಿಗ್ರಹದ ಮೊದಲ ಫೋಟೋ ಈಗಾಗಲೇ ಬಹಿರಂಗವಾಗಿದ್ದು, ಇದು ಟ್ರಸ್ಟ್ ನ ಆಕ್ರೋಶಕ್ಕೂ ಕಾರಣವಾಗಿತ್ತು.ಇದೀಗ ಇಂದು ಅಧಿಕೃತವಾಗಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಬಳಿಕ ವಿಗ್ರಹದ ಮೂಲರೂಪ ಬಹಿರಂಗವಾಗಲಿದೆ.ಭವ್ಯ ರಾಮಮಂದಿರರಾಮಮಂದಿರ ಉದ್ಘಾಟನಾ ಕಾರ್ಯಕ್ರಮರಾಮಮಂದಿರ ಉದ್ಘಾಟನಾ ಕಾರ್ಯಕ್ರಮಅಯೋಧ್ಯೆಯಲ್ಲಿ ಸಂಭ್ರಮಅಯೋಧ್ಯೆಯಲ್ಲಿ ಸಂಭ್ರಮಅಯೋದ್ಯೆಯಲ್ಲಿರುವ ಮೂಲ ರಾಮಲಲ್ಲಾ ವಿಗ್ರಹಅಯೋದ್ಯೆಯಲ್ಲಿರುವ ಮೂಲ ರಾಮಲಲ್ಲಾ ವಿಗ್ರಹರಾಮಮಂದಿರ ಉದ್ಘಾಟನಾ ಕಾರ್ಯಕ್ರಮರಾಮಮಂದಿರ ಉದ್ಘಾಟನಾ ಕಾರ್ಯಕ್ರಮರಾಮಮಂದಿರ ಉದ್ಘಾಟನಾ ಕಾರ್ಯಕ್ರಮರಾಮಮಂದಿರ ಉದ್ಘಾಟನಾ ಕಾರ್ಯಕ್ರಮರಾಮಮಂದಿರ ಉದ್ಘಾಟನಾ ಕಾರ್ಯಕ್ರಮರಾಮಮಂದಿರ ಉದ್ಘಾಟನಾ ಕಾರ್ಯಕ್ರಮರಾಮಮಂದಿರ ಉದ್ಘಾಟನಾ ಕಾರ್ಯಕ್ರಮರಾಮಮಂದಿರ ಉದ್ಘಾಟನಾ ಕಾರ್ಯಕ್ರಮರಾಮಮಂದಿರ ಉದ್ಘಾಟನಾ ಕಾರ್ಯಕ್ರಮರಾಮಮಂದಿರ ಉದ್ಘಾಟನಾ ಕಾರ್ಯಕ್ರಮರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕಾಗಮಿಸಿದ ಪ್ರಧಾನಿ ಮೋದಿರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕಾಗಮಿಸಿದ ಪ್ರಧಾನಿ ಮೋದಿರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕಾಗಮಿಸಿದ ಪ್ರಧಾನಿ ಮೋದಿFollow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos