ಕ.ಪ್ರ.ವಾರ್ತೆ ಕುಣಿಗಲ್ ಆ. 11-
ಯಾವುದೇ ಚುನಾವಣೆಯಿರಲಿ, ಯಾವುದೇ ಪಕ್ಷದ ಅಭ್ಯರ್ಥಿಗಳ ಬಗ್ಗೆ ವೈಯುಕ್ತಿಕ ಟೀಕೆ ಮಾಡುವುದು ಸರಿಯಲ್ಲ. ನಿಜಕ್ಕೂ ಇಂಥ ವಿದ್ಯಮಾನಗಳನ್ನು ಎಲ್ಲರೂ ಖಂಡಿಸಬೇಕಿದೆ. ರಾಜಕಾರಣದ ಸಚ್ಚಾರಿತ್ರ್ಯಮೌಲ್ಯಗಳನ್ನು ಕಾಪಾಡದೆ ಹೋದಲ್ಲಿ ಅದು ಯಾವುದೇ ರಾಜಕಾರಣಿಗೂ ಶೋಭೆ ತರವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ಕಣದಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳಿರಲಿ ವೈಯುಕ್ತಿಕ ಟೀಕೆ ನಿಜಕ್ಕೂ ಶೋಭೆ ತರುವುದಿಲ್ಲ. ಪ್ರಸಕ್ತ ಚುನಾವಣೆಯಲ್ಲಿನ ಜೆಡಿಎಸ್, ಬಿಜೆಪಿ ಅಪವಿತ್ರ ಮೈತ್ರಿಯನ್ನು ರಾಜ್ಯದ ಜನತೆ ಎಂದಿಗೂ ಕ್ಷಮಿಸುವುದಿಲ್ಲ.
ಈಗಾಗಲೇ ರಾಜ್ಯದ ಮತದಾರರು ಪ್ರಜ್ಞಾವಂತರಾಗಿದ್ದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಹಾಕಿಕೊಂಡಿದ್ದ ಎಲ್ಲಾ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿ ಕಾಂಗ್ರೆಸ್‌ಗೆ ಸ್ಪಷ್ಟ ಬೆಂಬಲ ಸೂಚಿಸಿದ್ದಾರೆ ಎಂದರು.