ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮತ್ತೆ ಬಿಜೆಪಿಗೆ ಕರೆತರಲು ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ನಾಯಕರು ಡಿ.4 ಇಲ್ಲವೆ 5ರಂದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಮಟ್ಟದಲ್ಲಿ ಈಗಾಗಲೇ ಯಡಿಯೂರಪ್ಪ ಅವರನ್ನು ಮರಳಿ ಪಕ್ಷಕ್ಕೆ ಕರೆತರುವುದಕ್ಕೆ ಸಂಬಂಧಿಸಿದಂತೆ ಚರ್ಚೆಯಾಗಿದ್ದು, ರಾಷ್ಟ್ರಮಟ್ಟದ ನಾಯಕರೂ ಈ ಕುರಿತು ಚರ್ಚಿಸಿದ್ದಾರೆ. ಡಿಸೆಂಬರ್ ಕೊನೆಯ ವಾರ ಅಥವಾ ಜನವರಿ ಮೊದಲನೇ ವಾರದಲ್ಲಿ ರಾಜ್ಯಕ್ಕೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಮೋದಿ ಭೇಟಿಗೆ ಮುನ್ನ ಯಡಿಯೂರಪ್ಪ ಅವರನ್ನು ಮರಳಿ ಪಕ್ಷಕ್ಕೆ ಕರೆತರಲು ಚಿಂತಿಸಲಾಗುತ್ತಿದೆ ಎಂದರು.