ಯಾವುದೇ ಸಂಸ್ಥೆಗೆ ಗಣಿ ಲಾಭ ಮಾಡಿಲ್ಲ: ಡಿಕೆಶಿ
ಬೆಂಗಳೂರು: ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ಸೇರಿದಂತೆ ಯಾವುದೇ ತನಿಖೆಗೆ ನಾನು ಸಿದ್ಧ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಪುನರುಚ್ಚರಿಸಿದ್ದಾರೆ. ಸಚಿವನಾಗಿದ್ದ ಸಂದರ್ಭದಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ಯಾವುದೇ ಸಂಸ್ಥೆ ಹಾಗೂ ವ್ಯಕ್ತಿಗೆ ಗಣಿಗಾರಿಕೆ ಸಂಬಂಧ ಲಾಭ ಮಾಡಿಕೊಟ್ಟಿಲ್ಲ. ನಾನು, ನನ್ನ ಕುಟುಂಬದ ವಿರುದ್ಧ ಮಾಡಿದ್ದ ಅಕ್ರಮ ಗಣಿಗಾರಿಕೆಯ ಎಲ್ಲ ಆರೋಪಗಳು ನ್ಯಾಯಾಲಯದಲ್ಲಿ ವಜಾಗೊಂಡಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೈಸೂರು ಮಿನರಲ್ಸ್ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳುವಾಗ ಅಗತ್ಯ ಹಣವನ್ನು ನೀಡಿದ್ದರೂ, ಅದಿರು ಒದಗಿಸುವಲ್ಲಿ ಸಂಸ್ಥೆ ವಿಫಲವಾಗಿತ್ತು. ಹೀಗಾಗಿ ಒಪ್ಪಂದ ಪುರಸ್ಕರಿಸುವಂತೆ ಮೈಸೂರು ಮಿನರಲ್ಸ್ಗೆ ಸೂಚನೆ ನೀಡುವಂತೆ ಅಂದಿನ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದ್ದೆನೇ ಹೊರತು ಯಾವುದೇ ಲಾಭ ಯಾಚಿಸಿರಲಿಲ್ಲ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.