ಕೆಜೆಪಿಗೆ ಚುನಾವಣಾ ಆಯೋಗದ ಮಾನ್ಯತೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಜನತಾ ಪಕ್ಷಕ್ಕೆ ರಾಜ್ಯ ಚುನಾವಣಾ ಆಯೋಗ ನೋಂದಾಯಿತ ರಾಜಕೀಯ ಪಕ್ಷಗಳ ಸ್ಥಾನಮಾನ ನೀಡಿದೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ನೋಂದಾಯಿತ ರಾಜಕೀಯ ಪಕ್ಷಗಳ ಪಟ್ಟಿಯಲ್ಲಿ ಕೆಜೆಪಿಗೆ 47ನೇ ಸ್ಥಾನ ನೀಡಿ ರಾಜ್ಯಪತ್ರ ಪ್ರಕಟಿಸಿದೆ. ಜತೆಗೆ ಇನ್ನೆರಡು ದಿನಗಳಲ್ಲಿ ಕೆಜೆಪಿಗೆ ಅಧಿಕೃತ ಚಿಹ್ನೆಯೂ ಲಭ್ಯವಾಗಲಿದ್ದು, ಪಕ್ಷವು ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವಂತ ನೆಲೆಯಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ವಿ. ಧನಂಜಯಕುಮಾರ್ ತಿಳಿಸಿದ್ದಾರೆ.