'ಸ್ಥಳೀಯ ಸಂಸ್ಥೆ ಚುನಾವಣೆಯಿಂದ ತೊಂದರೆಯಿಲ್ಲ'
ಹಗರಿಬೊಮ್ಮನಹಳ್ಳಿ: ಸುಪ್ರೀಂ ಕೋರ್ಟ್ ಆದೇಶದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಹಗರಿಬೊಮ್ಮನಹಳ್ಳಿಯಲ್ಲಿ ರಾಜ್ಯ ವೀರಶೈವ ಲಿಂಗಾಯಿತ ಪಂಚಮಸಾಲಿ ಸಮಾಜದ 5ನೇ ವರ್ಷದ ಪೀಠಾರೋಹಣ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸ್ಥಳೀಯ ಸಂಸ್ಥೆಯ ಚುನಾವಣೆಗಳು ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಲಿದೆ. ಆದರಿದು ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಆಗುವುದಿಲ್ಲ ಎಂದರು.