ಜೆಡಿಎಸ್ಗೆ ದಳವಾಯಿ ರಾಜಿನಾಮೆ
ಬೆಳಗಾವಿ: ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಅರವಿಂದ ದಳವಾಯಿ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ರಾಜ್ಯಾಧ್ಯಕ್ಷ, ಎಚ್.ಡಿ. ಕುಮಾರಸ್ವಾಮಿ ಅವರ ಅಹಿಂದ ವಿರೋಧಿ ನೀತಿ, ಸರ್ವಾಧಿಕಾರಿ ಧೋರಣೆಗೆ ಬೇಸತ್ತು ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಹೇಳಿದರು. ರಾಮದುರ್ಗ ಮತಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡುವುದಿಲ್ಲ ಎಂದು ಸ್ವತಃ ದೇವೇಗೌಡ ಮತ್ತು ಕುಮಾರಸ್ವಾಮಿ ಅವರೇ ಸ್ಪಷ್ಟಪಡಿಸಿದ್ದಾರೆ. ಇದರಿಂದ ನಾನು ಹಾಗೂ ನನ್ನ ಬೆಂಬಲಿಗರು ಜೆಡಿಎಸ್ ತ್ಯಜಿಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದರು.