ಬರೋದ್ ನಿಮ್ಮಿಷ್ಟ, ಟಿಕೆಟ್ ಹೈಕಮಾಂಡ್ ಇಷ್ಟ: ಪರಮೇಶ್ವರ
ಬೆಂಗಳೂರು: ಪಕ್ಷ ಕಟ್ಟುವುದಕ್ಕಾಗಿ ಯಾರು ಬೇಕಾದರೂ ಕಾಂಗ್ರೆಸ್ಗೆ ಬರಬಹುದು. ಆದರೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವುದು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ನ ತತ್ವ ಸಿದ್ಧಾಂತವನ್ನು ಮೆಚ್ಚಿ ಯಾರು ಬೇಕಾದರೂ ಪಕ್ಷಕ್ಕೆ ಬರಬಹುದು ಎಂದು ಹೇಳಿದರು.
ಕಾಂಗ್ರೆಸ್ ತಮ್ಮ ಪಕ್ಷದ ಶಾಸಕರನ್ನು ಖರೀದಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಪರೇಷನ್ ಕಮಲದ ಹೆಸರಲ್ಲಿ ಶಾಸಕರನ್ನು ಖರೀದಿ ಮಾಡಿದ್ದು ಯಾರು ಎಂಬುದು ಇಡೀ ರಾಷ್ಟ್ರಕ್ಕೆ ಗೊತ್ತಿದೆ. ನಾವೇನು ಬಿಜೆಪಿ ಶಾಸಕರನ್ನು ದುಡ್ಡು ಕೊಟ್ಟು ಪಕ್ಷಕ್ಕೆ ಕರೆ ತಂದಿಲ್ಲ ಎಂದು ತಿರುಗೇಟು ನೀಡಿದರು. ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ವಿಚಾರದಲ್ಲಿ ಜಿಲ್ಲಾ ಕಾಂಗ್ರೆಸ್ ಅಭಿಪ್ರಾಯ ಪಡೆದಿಲ್ಲ ಎಂದು ಡಿ.ಕೆ. ಶಿವಕುಮಾರ್ ವ್ಯಕ್ತಪಡಿಸಿರುವ ಆಕ್ಷೇಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಿಲ್ಲಾ ಕಾಂಗ್ರೆಸ್ ಅಭಿಪ್ರಾಯ ಪಡೆದೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.