ಬಿಜೆಪಿ, ಜೆಡಿಎಸ್ನ 20 ಶಾಸಕರು ಕಾಂಗ್ರೆಸ್ಗೆ
ತುಮಕೂರು: ಶೀಘ್ರದಲ್ಲೇ ಬಿಜೆಪಿ ಹಾಗೂ ಜೆಡಿಎಸ್ನಿಂದ ಒಟ್ಟು 20 ಶಾಸಕರು ಕಾಂಗ್ರೆಸ್ಗೆ ಬರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಅವರು ತುಮಕೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಶಾಸಕರ ಜತೆ ಈಗಾಗಲೇ ಚರ್ಚಿಸಲಾಗಿದೆ. ಆದರೆ ಸದ್ಯ ಯಾರ ಹೆಸರನ್ನೂ ಹೇಳಲಾರೆ. ಕಾಂಗ್ರೆಸ್ಗೆ ಸೇರ್ಪಡೆಯಾಗುವವರು ಪಕ್ಷದ ಸಿದ್ಧಾಂತ ಹಾಗೂ ಷರತ್ತುಗಳಿಗೆ ಒಳಪಟ್ಟು ಸೇರ್ಪಡೆಯಾಗಬೇಕು. ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ಅನುಮತಿ ಬೇಕೆಂದರು.
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಕಾಂಗ್ರೆಸ್ಗೆ ಸೇರ್ಪಡೆಯಾಗುವ ವಿಷಯ ತಮಗೆ ಗೊತ್ತಿಲ್ಲ. 'ಬಸವ ಶ್ರೀ' ಪ್ರಶಸ್ತಿ ಬಂದ ವೇಳೆ ತಾವು ಅವರ ಮನೆಗೆ ಹೋಗಿ ಅಭಿನಂದಿಸಿದೆ. ನಂತರ ಬಿದರಿ ಅವರೂ ತಮ್ಮ ಮನೆಗೆ ಬಂದಿದ್ದರು. ಎರಡೂ ಸಂದರ್ಭಗಳಲ್ಲಿ ಕಾಂಗ್ರೆಸ್ಗೆ ಬಿದರಿ ಸೇರ್ಪಡೆಯಾಗುವ ವಿಷಯ ಇಬ್ಬರಿಂದಲೂ ಪ್ರಸ್ತಾಪವಾಗಲಿಲ್ಲ. ಕಾಂಗ್ರೆಸ್ಗೆ ಸೇರುವುದು, ಬಿಡುವುದು ಅವರಿಗೆ ಬಿಟ್ಟಿದ್ದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಎಸ್ಎಂ ನಿವೃತ್ತಿ ಸುಳ್ಳು: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್.ಎಂ. ಕೃಷ್ಣ ದೇಶ ಕಂಡ ಅಪರೂಪದ, ಪ್ರತಿಷ್ಠಿತ ರಾಜಕಾರಣಿ. ನಮ್ಮೆಲ್ಲರ ಮಾರ್ಗದರ್ಶಕ. ಅವರು ರಾಜಕೀಯಕ್ಕೆ ಬಂದು 50 ವರ್ಷಗಳಾಗಿವೆ. ಇಂಥ ಸಂದರ್ಭದಲ್ಲಿ ಅವರಿಗೆ ಅಭಿನಂದಿಸುವುದು, ಕಾರ್ಯಕ್ರಮ ಆಯೋಜಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು. ಕೃಷ್ಣ ರಾಜಕೀಯ ನಿವೃತ್ತಿ ಪಡೆಯುತ್ತಾರೆ ಎಂಬುದು ಸುಳ್ಳು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಣಾಳಿಕೆಯನ್ನು ಪಕ್ಷದ ವತಿಯಿಂದ ಇನ್ನೆರಡು ದಿನಗಳಲ್ಲಿ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗುವುದೆಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.