ಗಣಿ ಲೂಟಿ ವಿಚಾರಣೆಗೆ ವಿಶೇಷ ಕಟಕಟೆ
ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಣಿ ಹಗರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು. ಆ ಮೂಲಕ ಈ ನೆಲದ ಸಂಪತ್ತು ಲೂಟಿ ಮಾಡಿದವರಿಂದ 1 ಲಕ್ಷ ಕೋಟಿ ವಸೂಲು ಮಾಡಲಾಗುವುದು.
- ಇಂಥದೊಂದು ಭರವಸೆ ನೀಡಿರಿವುದು ಕಾಂಗ್ರೆಸ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ.ಬುಧವಾರ ನಗರದಲ್ಲಿ ಆಯೋಜಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, 'ಗಣಿ ಲೂಟಿ ಬಿಜೆಪಿ ಸರ್ಕಾರದ ಬಹು ದೊಡ್ಡ ಹಗರಣ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯದ ಹಲವು ಮತ್ತು ಕೇಂದ್ರದ ಕೆಲವು ಬಿಜೆಪಿ ಮುಖಂಡರು ಅದರಲ್ಲಿ ಶಾಮೀಲಾಗಿದ್ದಾರೆ. ಹಾಗಾಗಿ ಈ ಕುರಿತು ಗಂಭೀರ ವಿಚಾರಣೆ ಆಗಲೇಬೇಕಿದೆ' ಎಂದರು.
ಕಾಂಗ್ರೆಸ್ ಮೊದಲಿನಿಂದಲೂ ಲೂಟಿಕೋರರ ವಿರುದ್ಧ ಹೋರಾಟ ಮಾಡುತ್ತ ಬಂದಿದೆ. ಬೆಂಗಳೂರಿನಿಂದ ಬಳ್ಳಾರಿ ವರೆಗೆ ಪಾದಯಾತ್ರೆ ಮಾಡಿ ಜನಜಾಗೃತಿ ಮೂಡಿಸಿದೆ.
ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅವರು ತಮ್ಮ ವರದಿಯಲ್ಲಿ ಸುಮಾರು ರು. 20 ಸಾವಿರ ಕೋಟಿ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗಿದೆ. ಅದರ ನಾಲ್ಕು ಪಟ್ಟು ವಸೂಲು ಮಾಡಬೇಕು ಎಂದು ಶಿಫಾರಸು ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 1 ಲಕ್ಷ ಕೋಟಿ ವಸೂಲು ಮಾಡಲು ಬದ್ಧವಿರುವುದಾಗಿ ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.