ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಮಾಜಿ ಸಚಿವ ಕಾಂತಾ ಜೆಡಿಎಸ್‌ಗೆ ರಾಜಿನಾಮೆ

Parashurama
Updated On : 28 Feb 2013, 1:09 am

ಗುಲ್ಬರ್ಗ: ಮಾಜಿ ಸಚಿವ, ಹೋರಾಟಗಾರ ಎಸ್.ಕೆ. ಕಾಂತಾ ಜೆಡಿಎಸ್‌ಗೆ ರಾಜಿನಾಮೆ ನೀಡಿದ್ದಾರೆ. ತಮ್ಮ ರಾಜಿನಾಮೆ ಪತ್ರವನ್ನು ಪಕ್ಷದ ರಾಷ್ಟ್ರೀಯ ನಾಯಕ, ಮಾಜಿ ಪ್ರಧಾನಿ ದೇವೇಗೌಡರಿಗೆ ಕಳುಹಿಸಿದ್ದಾರೆ. ಜೆಡಿಎಸ್ ಸಂಸದೀಯ ಮಂಡಳಿ ಸದಸ್ಯ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿದ್ದಾಗಿ ಕಾಂತಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಗುಲ್ಬರ್ಗ ಮಹಾನಗರ ಪಾಲಿಕೆಯಲ್ಲಿ ಪಕ್ಷದ ಪರವಾಗಿ ಬಿ ಫಾರ್ಮ್ ಹಂಚಿಕೆ ವಿಷಯದಲ್ಲಿ ತಮ್ಮನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ತೀವ್ರ ಅಸಮಾಧಾನ ಹೊರಹಾಕಿದ್ದ ಕಾಂತಾ, ತಮ್ಮ ರಾಜಿನಾಮೆ ಪತ್ರದಲ್ಲಿಯೂ ಪ್ರಸ್ತಾಪಿಸಿದ್ದಾರೆ. ಸಮಾಜವಾದಿ ಚಳವಳಿಯ ಹಿನ್ನೆಲೆಯಿಂದ ರಾಜಕೀಯಕ್ಕೆ ಬಂದಿರುವ ಕಾಂತಾ ಕಳೆದ ಅನೇಕ ವರ್ಷಗಳಿಂದ ದಳ ಪರಿವಾರದಲ್ಲಿದ್ದರು. ತಮ್ಮ ಜನಪರ ಕಾಳಜಿ, ಹೋರಾಟಗಳಿಂದಾಗಿ ಹೆಸರಾಗಿದ್ದ ಕಾಂತಾ ಅವರ ಉಪಸ್ಥಿತಿಯೇ ಜೆಡಿಎಸ್‌ಗೆ ಜಿಲ್ಲೆಯಲ್ಲಿ ಒಂದು ವಿಧದಲ್ಲಿ ಕಿಮ್ಮತ್ತು ತಂದುಕೊಟ್ಟಿತ್ತು. ಇದೀಗ ಕಾಂತಾ ಅವರ ರಾಜಿನಾಮೆ ಪ್ರಕರಣ ಆ ಪಕ್ಷದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಯಾವುದೇ ಕಾರಣಕ್ಕೂ ತಾವು ಈಗ ನೀಡಿರುವ ರಾಜಿನಾಮೆ ವಾಪಸ್ ಪಡೆಯಲಾಗದು ಎಂದೂ ಸ್ಪಷ್ಪಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments