ಬೆಂಗಳೂರು: ರಾಜ್ಯ ವಿಭಜನೆ ಕುರಿತು ಹೇಳಿಕೆ ನೀಡಿರುವ ಕೃಷಿ ಸಚಿವ ಉಮೇಶ್ ಕತ್ತಿ ವಿರುದ್ಧ ನಗರದ 7ನೇ ಎಸಿಎಂಎಂ ನ್ಯಾಯಾಲಯ ಕಿಡಿಕಾರಿದ್ದು, ಸಚಿವರ ವಿರುದ್ಧ ಪ್ರಕರಣ ದಾಖಲಿಸುವಂತೆ ಮಲ್ಲೇಶ್ವರ ಠಾಣೆ ಪೊಲೀಸರಿಗೆ ಆದೇಶಿಸಿದೆ.ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಹೇಳಿಕೆ ನೀಡಿದ್ದ ಕತ್ತಿ ವಿರುದ್ಧ ಕನ್ನಡ ಅನುಷ್ಠಾನ ಮಂಡಳಿ ಅಧ್ಯಕ್ಷ ಆರ್.ಎ.ಪ್ರಸಾದ್ ಅವರ ಮುಂದಾಳತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದವು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜಯಶಂಕರ್ ಅವರು ಕತ್ತಿ ವಿರುದ್ಧ ದೂರು ದಾಖಲಿಸುವಂತೆ ಆದೇಶಿಸಿದ್ದಾರೆ.