ಬೋಪಯ್ಯ ನಡೆ ಸರಿಯಾಗಿಲ್ಲ: ಜಿಎಸ್ಬಿ
ತುಮಕೂರು: ಸ್ಪೀಕರ್ ಕೆ.ಜಿ. ಬೋಪಯ್ಯ ತಮ್ಮ ಕಾಲ ಮೇಲೆ ತಾವೇ ಕಲ್ಲೆತ್ತಿ ಹಾಕಿಕೊಂಡರೆ ಯಾರೇನು ಮಾಡಲು ಸಾಧ್ಯ ಎಂದು ತುಮಕೂರು ಬಿಜೆಪಿ ಸಂಸದ ಜಿ.ಎಸ್. ಬಸವರಾಜ್ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪೀಕರ್ ಬೋಪಯ್ಯ ತಮ್ಮ ಅಧಿಕಾರ ವ್ಯಾಪ್ತಿಯನ್ನು ಅರಿತು, ನಿಷ್ಪಕ್ಷಪಾತವಾಗಿ ವರ್ತಿಸಬೇಕು. ಆದರೆ ಬೋಪಯ್ಯನವರ ನಡೆ ಸರಿಯಾಗಿಲ್ಲ. ಬೋಪಯ್ಯ ದ್ವಂದ್ವ ನಿಲುವು ಪ್ರದರ್ಶಿಸುತ್ತಿದ್ದಾರೆ ಎಂದು ಬಸವರಾಜ್ ಆಕ್ರೋಶ ವ್ಯಕ್ತಪಡಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.