ಪಕ್ಷಪಾತಿ ಸ್ಪೀಕರ್: ಡಾ.ಪರಮೇಶ್ವರ್
ಕೊರಟಗೆರೆ: ಸಂವಿಧಾನ ಬದ್ಧ ಹುದ್ದೆಯಲ್ಲಿರುವ ಸ್ಪೀಕರ್ ಬೋಪಯ್ಯ ಪಕ್ಷಪಾತವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಆರೋಪಿಸಿದರು. ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಸಕ್ತ ರಾಜ್ಯ ರಾಜಕಾರಣದಲ್ಲಿ ಆಡಳಿತ ಪಕ್ಷದ ಶಾಸಕರಗಳು ರಾಜಿನಾಮೆ ನೀಡಲು ಮುಂದಾಗಿದ್ದರೂ ರಾಜಿನಾಮೆ ಸ್ವೀಕರಿಸಲು ಉಪಸ್ಥಿತರಿರಬೇಕಿದ್ದ ಸ್ಪೀಕರ್ ಆಡಳಿತ ಪಕ್ಷಕ್ಕೆ ಅನುಕೂಲ ಮಾಡಿಕೊಡಲು ಯಾರಿಗೂ ಹೇಳದೆ ಪಲಾಯನ ಮಾಡಿರುವುದು ಸಂವಿಧಾನಕ್ಕೆ ಅಗೌರವ ತಂದಂತಾಗಿದೆ ಎಂದರು. ಈ ಹಿಂದೆ ಶಾಸಕರು ರಾಜಿನಾಮೆ ನೀಡಿದಾಗ ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸದೆ ಲೋಪವೆಸಗಿರುವ ಬಗ್ಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ್ದರೂ, ಅದನ್ನು ಅರಿತುಕೊಳ್ಳದೆ ಪುನಾ ಒಂದು ಪಕ್ಷದ ಕೈಗೊಂಬೆಯಂತೆ ವರ್ತಿಸಿರುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.