ಸಭಾಪತಿಗೆ ದೂರು ನೀಡಲು ನಿರ್ಧಾರ
ಬೆಂಗಳೂರು: ಕೆಜೆಪಿ ಜತೆ ಗುರುತಿಸಿರುವ 12 ವಿಧಾನಸಭಾ ಸದಸ್ಯರ ಅನರ್ಹತೆ ಕೋರಿ ವಿಧಾನಸಭೆ ಕಾರ್ಯದರ್ಶಿಗಳಿಗೆ ದೂರು ನೀಡಿದ ಬೆನ್ನಲ್ಲೇ ವಿಧಾನ ಪರಿಷತ್ತಿನ ಐವರು ಸದಸ್ಯರ ಅನರ್ಹತೆ ಕೋರಿ ಸಭಾಪತಿಗಳಿಗೆ ದೂರು ನೀಡಲು ಬಿಜೆಪಿ ನಿರ್ಧರಿಸಿದೆ.
ವಿಧಾನ ಪರಿಷತ್ ಸದಸ್ಯರಾದ ಬಿ.ಜೆ. ಪುಟ್ಟಸ್ವಾಮಿ, ಭಾರತಿ ಶೆಟ್ಟಿ, ಡಾ. ಮುಮ್ತಾಜ್ ಅಲಿಖಾನ್, ಎಂ.ಡಿ. ಲಕ್ಷ್ಮೀನಾರಾಯಣ, ಮೋಹನ್ ಲಿಂಬಿಕಾಯಿ, ಶಿವರಾಜ್ ಸಜ್ಜನ್ ಅವರನ್ನು ಅನರ್ಹಗೊಳಿಸುವಂತೆ ಮಂಗಳವಾರ ಸಭಾಪತಿಗಳಿಗೆ ದೂರು ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ ತಿಳಿಸಿದ್ದಾರೆ.
ಈ ಐವರನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನ ಪರಿಷತ್ತಿಗೆ ನೇಮಕ ಮಾಡಲಾಗಿದೆ. ಹೀಗಿದ್ದರೂ ಅವರು ಮುಖ್ಯಮಂತ್ರಿ ಸೇರಿದಂತೆ ಸರ್ಕಾರದ ವಿರುದ್ಧ ನಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಇವರನ್ನು ಅನರ್ಹಗೊಳಿಸುವಂತೆ ಸಭಾಪತಿಗಳನ್ನು ಕೋರಲಾಗುವುದು ಎಂದು ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.