ಗೌರವಯುತವಾಗಿ ಶೆಟ್ಟರ್ ರಾಜಿನಾಮೆ ನೀಡಲಿ: ಪರಮೇಶ್ವರ್
ಮಂಗಳೂರು: ಜನರ ಕಷ್ಟಗಳಿಗೆ ಸ್ಪಂದಿಸದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಜನರನ್ನು ಗೌರವಿಸುವುದಾದರೆ ತಕ್ಷಣವೇ ರಾಜಿನಾಮೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆಗ್ರಹಿಸಿದರು.
ಎರಡನೇ ದಿನವನ್ನು 'ಕಾಂಗ್ರೆಸ್ ನಡಿಗೆ ಕೋಮುಸೌಹಾರ್ದದ ಕಡೆಗೆ' ಯಶಸ್ವಿಯಾಗಿ ಪೂರೈಸಿದ್ದು, ಸುರತ್ಕಲ್‌ನಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 35 ಸಾವಿರ ಕೋಟಿ ಬಂಡವಾಳದೊಂದಿಗೆ ಅನೇಕ ಸಣ್ಣ ಕೈಗಾರಿಕೆಗಳನ್ನು ಆರಂಭಿಸಲು ಅವಕಾಶ ನೀಡಿತು. ಆದರೆ ಬಿಜೆಪಿ ಜನರ ನೋವಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದರು. ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಮಾತನಾಡಿದರು.
ಬಿಜೆಪಿಯನ್ನು ಮನೆಗೆ ಕಳಿಸುತ್ತೇವೆ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಬೆಂಗಳೂರು, ಬಳ್ಳಾರಿ ಪಾದಯಾತ್ರೆ ಮೂಲಕ ರೆಡ್ಡಿ, ಯಡ್ಡಿಯನ್ನು ಜೈಲಿಗೆ ಕಳುಹಿಸಿದೆವು. ಈ ಬಾರಿಯ ಪಾದಯಾತ್ರೆಯಲ್ಲಿ ಬಿಜೆಪಿಯನ್ನು ಮನೆಗ ಕಳುಹಿಸುತ್ತೇವೆ ಎಂದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.