ಕನ್ನಡಪ್ರಭ ವಾರ್ತೆ, ಬೆಂಗಳೂರು, ಜೂ. 3-
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಧ್ಯಕ್ಷತೆಯಲ್ಲಿ 'ಆಂತರಿಕ ಭದ್ರತೆ' ಕುರಿತಂತೆ ಮುಖ್ಯಮಂತ್ರಿಗಳ ಸಮ್ಮೇಳನ ಮೇ 5ರ ಗುರುವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಈ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿಲಿದ್ದಾರೆ. ಸಮ್ಮೇಳನದ ನಂತರ ದೆಹಲಿಯಿಂದ ಹೊರಟು, ಮಧ್ಯಾಹ್ನ 3.45ಕ್ಕೆ ಬೆಂಗಳೂರು ತಲುಪಲಿದ್ದಾರೆ.