ಬೆಂಗಳೂರು: ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅದ್ದಂಡ ಕಾರಿಯಪ್ಪ ಅವರ ನೇಮಕ ಆದೇಶವನ್ನು ಅವಧಿಗೆ ಮುನ್ನವೇ ರದ್ದುಗೊಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನೋಟಿಸ್ ಜಾರಿ ಮಾಡಿದೆ.
ತಮ್ಮ ನೇಮಕ ರದ್ದುಗೊಳಿಸಿದ ಸರ್ಕಾರದ ಆದೇಶ ಪ್ರಶ್ನಿಸಿ ಕಾರಿಯಪ್ಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಮೋಹನಶಾಂತನಗೌಡರ್ ಅವರಿದ್ದ ಏಕಸದಸ್ಯ ಪೀಠ, ವಿಚಾರಣೆಯನ್ನು ಮುಂದೂಡಿದೆ. ಕಾರಿಯಪ್ಪ ಅವರು 2012ರ ಮಾರ್ಚ್ 24ರಂದು ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಅವರ ಮೂರು ವರ್ಷಗಳ ಅವಧಿ ಪೂರ್ಣಗೊಳ್ಳುವ ಮುನ್ನವೇ ರಾಜಿನಾಮೆ ನೀಡುವಂತೆ ಸರ್ಕಾರ ಆದೇಶಿಸಿತ್ತು. ಈ ಸಂಬಂಧ ಕಳೆದ ಜೂ. 15ರಂದು ಸರ್ಕಾರ ಆದೇಶ ಹೊರಡಿಸಿತ್ತು.