ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಮೇ ಒಂದು-ಎರಡನೇ ವಾರದಲ್ಲಿ ವಿಧಾನಸಭೆ ಚುನಾವಣೆ ಸಂಭವ

Parashurama
Updated On : 2 Mar 2013, 11:46 am

ಕ.ಪ್ರ. ವಾರ್ತೆ  ಬೆಂಗಳೂರು ಮಾ. 2
ರಾಜ್ಯ ವಿಧಾನಸಭೆ ಚುನಾವಣೆ ಮೇ ತಿಂಗಳ ಮೊದಲ ಹಾಗೂ ಎರಡನೆ ವಾರದಲ್ಲಿ ನಡೆಯುವ ಎಲ್ಲ ಲಕ್ಷಣಗಳು ಗೋಚರಿಸಿವೆ.
ಜೂನ್ 3ರೊಳಗೆ ಹೊಸ ವಿಧಾನಸಭೆ ರಚನೆಯಾಗಬೇಕು. ಇದರೊಳಗೆ ಚುನಾವಣೆ ಆಯೋಗದ ಎಲ್ಲ ಪ್ರಕ್ರಿಯೆಗಳೂ ಮುಗಿಯಲಿವೆ ಎಂದು ಕೇಂದ್ರ ಚುನಾವಣೆ ಆಯೋಗದ ಮುಖ್ಯ ಕಾರ್ಯಕಾರಿ ಅಧಿಕಾರಿ ವಿ.ಎಸ್. ಸಂಪತ್ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ, ಮಾರ್ಚ್ ಎರಡನೇ ವಾರದ ನಂತರ ಯಾವ ದಿನವಾದರೂ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ವಿಧಾನಸಭೆ ಜೂನ್ 3ರೊಳಗೆ ರಚನೆಯಾಗಬೇಕೆಂದರೆ ಅದಕ್ಕೆ ಒಂದು ವಾರದ ಮುನ್ನ ಚುನಾವಣಾ ಪ್ರಕ್ರಿಯೆಗಳು ಮುಗಿದಿರಬೇಕು. ಹೀಗಾಗಿ, ಮೇ 25ರೊಳಗೆ ಚುನಾವಣೆ ಫಲಿತಾಂಶ ಪ್ರಕಟವಾಗಬೇಕಿದೆ. ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳು ಮುಗಿಯಲು 45 ದಿನ ಅಗತ್ಯವಿದೆ. ಆದ್ದರಿಂದ ಏಪ್ರಿಲ್ ಮೊದಲ ವಾರದಲ್ಲಿ ಅಧಿಸೂಚನೆ ಪ್ರಕಟವಾಗಬೇಕಿದೆ. ಕೇಂದ್ರ ಚುನಾವಣೆ ಆಯೋಗ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆಯ ಬಗ್ಗೆ ಸಂಪೂರ್ಣ ಪರಿಶೀಲನೆ ಹಾಗೂ ಸಭೆಗಳನ್ನು ಯಶಸ್ವಿಯಾಗಿ ಪೂರೈಸಿದೆ. ಇನ್ನು ದೆಹಲಿಯಲ್ಲಿ ಕೆಲವು ಪ್ರಕ್ರಿಯೆಗಳನ್ನಷ್ಟೇ ಮುಗಿಸಬೇಕಿದೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments