ಸಿಬಿಐಗೆ ಖಾರದಪುಡಿ ಮಹೇಶ ಶರಣಾಗತಿ
ಬೆಂಗಳೂರು: ಬಳ್ಳಾರಿ ಅಕ್ರಮ ಗಣಿಗಾರಿಕೆ ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿ ಖಾರಪುಡಿ ಮಹೇಶ ಶನಿವಾರ ಸಿಬಿಐ ಅಧಿಕಾರಿಗಳಿಗೆ ಶರಣಾಗಿದ್ದಾನೆ. ಬೆಂಗಳೂರಿನಲ್ಲಿರುವ ಸಿಬಿಐ ಕಚೇರಿಗೆ ಬಂದು ಶರಣಾಗಿರುವ ಮಹೇಶ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಆತನನ್ನು ಬಂಧಿಸಿ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ನಿರ್ಧರಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಸಿಬಿಐ ಅಧಿಕಾರಿಗಳು ಜನಾರ್ದನ ರೆಡ್ಡಿ ಸಹಚರ ಸ್ವಸ್ಥಿಕ್ ನಾಗರಾಜ್ನನ್ನು ಬಂಧಿಸಿದ್ದರು. ಮಹೇಶ್ ಕೂಡಾ ರೆಡ್ಡಿ ಸಹಚರನಾಗಿದ್ದು, ಅಕ್ರಮ ಗಣಿಗಾರಿಕೆ ಸಂಬಂಧ ನಿವೃತ್ತ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ ಸಲ್ಲಿಸಿದ ವರದಿಯಲ್ಲೂ ಇವರಿಬ್ಬರ ಹೆಸರಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.