ಬಿಎಸ್ವೈ ಸ್ವಾಗತಕ್ಕೆ ಸಚಿವ ನಿರಾಣಿ ಪ್ರತ್ಯಕ್ಷ
ಕ.ಪ್ರ. ವಾರ್ತೆ ಜಮಖಂಡಿ ಮಾ. 3
ಸ್ಥಳೀಯ ಸಂಸ್ಥೆ ಚುನಾವಣೆ ಪ್ರಚಾರಕ್ಕೆ ಭಾನುವಾರ ಆಗಮಿಸಿದ್ದ ಮಾಜಿ ಮುಖ್ಯಮುಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರು ಹೆಲಿಪ್ಯಾಡ್ನಲ್ಲಿ ಹಾಜರಿದ್ದು ಸ್ವಾಗತಿಸಿ ಅಚ್ಚರಿ ಮೂಡಿಸಿದರು.
ಯಡಿಯೂರಪ್ಪ ಅವರು ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಜಮಖಂಡಿಗೆ ಬಂದಿಳಿದರು. ಜಮಖಂಡಿ ಹುಡ್ಕೋ ಕಾಲೋನಿ ಬಳಿ ಇರುವ ಹೆಲಿಪ್ಯಾಡ್ನಲ್ಲಿ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರು ಬಿಎಸ್ವೈ ಅವರನ್ನು ಸ್ವಾಗತಿಸಿ, ಬಸವೇಶ್ವರ ವೃತ್ತದ ಬಳಿ ಇರುವ ರುದ್ರಪೇಠದ ಮಠದವರೆಗೆ ತೆರಳಿದ್ದು ಬಿಜೆಪಿ ಕಾರ್ಯಕರ್ತರಿಗೆ ಮುಜುಗುರ ಉಂಟು ಮಾಡಿತು. ಕಳೆದೆರೆಡು ದಿನಗಳ ಹಿಂದಷ್ಟೇ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಬಿಜೆಪಿಯಲ್ಲಿದ್ದುಕೊಂಡು ಕೆಜೆಪಿ ಪರ ಪ್ರಚಾರ ಮಾಡುವುದು ವ್ಯಭಿಚಾರಕ್ಕೆ ಸಮಾನವೆಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.