ಬಿಜೆಪಿಗೆ ಮರಳುವ ಪ್ರಶ್ನೆಯೇ ಇಲ್ಲ: ಬಿಎಸ್ವೈ ಸ್ಪಷ್ಟನೆ
ಕ.ಪ್ರ. ವಾರ್ತೆ ದಾವಣಗೆರೆ/ಬಾಗಲಕೋಟೆ ಮಾ. 3
ಒಮ್ಮೆ ಬಿಜೆಪಿಯಿಂದ ಹೊರಗೆ ಕಾಲಿಟ್ಟ ನಂತರ ಮತ್ತೆ ಆ ಪಕ್ಷಕ್ಕೆ ಮರಳುವ ಪ್ರಶ್ನೆಯೇ ಇಲ್ಲ ಎಂದು ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಭಾನುವಾರ ದಾವಣಗೆರೆಯ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯನ್ನು ಬಿಟ್ಟು ಬಹಳ ದೂರ ಸಾಗಿ ಬಂದಿದ್ದೇನೆ. ನಮ್ಮದೇ ಆದಂಥ ಕೆಜೆಪಿ ಸಂಘಟನೆಗೆ ಒತ್ತು ನೀಡಿದ್ದೇವೆ. ಕೆಜೆಪಿ ಬಲಪಡಿಸಿ ಅಧಿಕಾರಕ್ಕೆ ತರುವ ಕಡೆಗೆ ಗಮನ ಕೇಂದ್ರೀಕರಿಸಿದ್ದೇವೆ. ಹೀಗಾಗಿ ಬಿಜೆಪಿಗೆ ಮರಳುವ ಪ್ರಶ್ನೆಯೇ ಇಲ್ಲ ಎಂದರು.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ದಿಢೀರ್ ಘೋಷಣೆಯಾಗಿರುವುದು ಕೆಜೆಪಿಗೆ ಒಂದು ಸವಾಲು ಮತ್ತು ಅವಕಾಶ. ಇದರಲ್ಲಿ ಯಶಸ್ವಿಯಾಗುತ್ತೇವೆ. ಜೆಡಿಎಸ್- ಕಾಂಗ್ರೆಸ್ ಪಕ್ಷ ಮೈತ್ರಿ ಮಾಡಿಕೊಂಡಿವೆ. ಆದ್ದರಿಂದ ಕುಮಾರಸ್ವಾಮಿ ಅವರು ನಮ್ಮನ್ನು ಟೀಕಿಸುತ್ತಿದ್ದಾರೆ. ಮಾ.11ರಂದು ಕೆಜೆಪಿ ತಾಕತ್ತು ಎಲ್ಲರಿಗೂ ಗೊತ್ತಾಗಲಿದೆ ಎಂದರು. ಸ್ಥಳೀಯ ಸಂಸ್ಥೆ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಜಮಖಂಡಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ರೈತ ಮತ್ತು ನೇಕಾರ ಎರಡು ಕಣ್ಣುಗಳಿದ್ದಂತೆ. ಯಾರೇ ನೋವಿನಿಂದ ಬಳಲಿದರೂ ಅದರಿಂದ ನನಗೆ ನೋವಾಗುತ್ತದೆ. ಅವರ ಹಿತದೃಷ್ಟಿಯೇ ನನಗೆ ಮುಖ್ಯ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.