'ಯಾರೇ ಬಿಜೆಪಿ ಬಿಟ್ಟರೂ ನಷ್ಟವಿಲ್ಲ'
ಬಿಜಾಪುರ: ಬಿಜೆಪಿ ರೈಲು ಬಂಡಿ ಇದ್ದಂತೆ. ಹತ್ತು ಮಂದಿ ಹತ್ತುತ್ತಾರೆ. ಹತ್ತು ಮಂದಿ ಇಳಿಯುತ್ತಾರೆ. ಯಾರೇ ಬಿಜೆಪಿ ಬಿಟ್ಟು ಹೋದರೂ ಪಕ್ಷಕ್ಕೆ ನಷ್ಟವಿಲ್ಲ. ಬಿಜೆಪಿ ರಾಷ್ಟ್ರೀಯ ಪಕ್ಷ. ಮುಖ್ಯಂತ್ರಿ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಮುಂಬರುವ ಚುನಾವಣೆ ಎದುರಿಸಲಾಗುತ್ತದೆ. ಶೆಟ್ಟರ್ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಗೇಶ ನಿರಾಣಿ ಅವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅದು ಏಕೋ ಗೊತ್ತಿಲ್ಲ. ನಾನು ರೈತರ ಪರ ಕಾಳಜಿ ಹೊಂದಿದ್ದವನು. ಕಬ್ಬು ಬೆಳೆಗಾರರಿಗೆ ನಿಗದಿತ ದರ ನೀಡಬೇಕು. ಸಕ್ಕರೆ ಕಾರ್ಖಾನೆಗಳ ಜತೆಗೆ ರೈತರು ಉಳಿಯಬೇಕು ಎಂದರು. ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯ ಮೇಲೆ ಯಾವುದೇ ರೀತಿ ಪ್ರಭಾವ ಬೀರುವುದಿಲ್ಲ. ವಿಧಾನಸಭೆ ಮತ್ತು ಲೋಕಸಭೆಯ ಚುನಾವಣೆಯೇ ಬೇರೆ. ಬಿಜೆಪಿ ಬೇರೆ ಯಾವುದೇ ಪಕ್ಷದ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಸ್ವಂತ ಬಲದ ಮೇಲೆ ಚುನಾವಣೆ ಎದುರಿಸುತ್ತದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.