ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಸ್ಪರ್ಧೆ: ಪೂಜಾ ಗಾಂಧಿ
ಕ.ಪ್ರ. ವಾರ್ತೆ ಬಳ್ಳಾರಿ ಮಾ. 3
ಮುಂದಿನ ವಿಧಾನಸಭೆ ಚುನಾವಣೆಗೆ ಉತ್ತರ ಕರ್ನಾಟಕದಿಂದ ಸ್ಪರ್ಧಿಸುತ್ತೇನೆ. ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದನ್ನು ಇನ್ನೆರಡು ದಿನಗಳಲ್ಲಿ ಸ್ಪಷ್ಟಪಡಿಸುತ್ತೇನೆ ಎಂದು ನಟಿ ಪೂಜಾ ಗಾಂಧಿ ತಿಳಿಸಿದ್ದಾರೆ.
ಭಾನುವಾರ ಬಿಎಸ್ಆರ್ ಕಾಂಗ್ರೆಸ್ಗೆ ಅಧಿಕೃತವಾಗಿ ಸೇರ್ಪಡೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾಜ ಸೇವೆಗೆ ರಾಜಕೀಯಕ್ಕೆ ಬಂದಿದ್ದೇನೆ. ಈಗಾಗಲೇ ಹಲವು ಎನ್ಜಿಒಗಳನ್ನು ಕಟ್ಟಿಕೊಂಡು ಕೆಲಸ ಮಾಡಿದ್ದೇನೆ. ಆದರೆ ಕೆಜೆಪಿಯಲ್ಲಿ ಇಂಥ ವೇದಿಕೆಗೆ ಅವಕಾಶ ಇರಲಿಲ್ಲ. ಮುಂದಿನ ವಿಧಾನಸಭೆ ಚುನಾವಣೆಗೆ ನನಗೆ ಟಿಕೆಟ್ ನೀಡುವುದಿಲ್ಲ ಎಂದರು. ಅಲ್ಲದೇ ಯಾವುದೇ ಸಭೆ, ಸಮಾರಂಭಕ್ಕೆ ಬರಬಾರದು ಎಂದು ಸೂಚಿಸುತ್ತಿದ್ದರು. ಒಂದೂವರೆ ತಿಂಗಳು ಮನೆಯಲ್ಲಿಯೇ ಕುಳಿತ್ತಿದ್ದೆ. ಸ್ವಾಭಿಮಾನಕ್ಕೆ ಧಕ್ಕೆ ಬಂದಿದ್ದರಿಂದ ಕೆಜೆಪಿ ತೊರೆದಿದ್ದೇನೆ. ಇನ್ನು ಜೆಡಿಎಸ್ ತೊರೆದಿರುವುದಕ್ಕೆ ಕಾರಣವಂತೂ ಎಲ್ಲರಿಗೂ ಗೊತ್ತಿದೆ ಎಂದರು. ಮಾಜಿ ಸಚಿವ ಬಿ. ಶ್ರೀರಾಮುಲು ಮಾತನಾಡಿ, ಪೂಜಾ ಗಾಂಧಿ, ರಕ್ಷಿತಾ ಅವರು ಪಕ್ಷಕ್ಕೆ ಶಕ್ತಿಯಾಗಿದ್ದಾರೆ. ಎಲ್ಲರೂ ಒಂದಾಗಿ ಪಕ್ಷ ಸಂಘಟನೆ ಮಾಡೋಣ ಎಂದರು.
ಇದಕ್ಕೂ ಮೊದಲು ನಗರದ ಬಿಎಸ್ಆರ್ ಕಚೇರಿಯಲ್ಲಿ ಶ್ರೀರಾಮುಲು ಹಾಗೂ ರಕ್ಷಿತಾ ಪ್ರೇಮ್ ಪಕ್ಷದ ಬಾವುಟ ನೀಡುವ ಮೂಲಕ ಬರ ಮಾಡಿಕೊಂಡರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.