ನಾಗರಾಜ ಶೆಟ್ಟಿ, ಎಂ.ಜಿ.ಹೆಗಡೆ ರಾಜಿನಾಮೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ನಲ್ಲಿ ನಡೆದ ಅಹಿತಕರ ಬೆಳವಣಿಗೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ನಾಗರಾಜ ಶೆಟ್ಟಿ, ರಾಜ್ಯ ಕಾರ್ಯದರ್ಶಿ ಎಂ.ಜಿ. ಹೆಗಡೆ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ಮಂದಿ ಪಕ್ಷಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.
ಜಿಲ್ಲಾ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಸ್ಲಂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿರಾಜ ಶೆಟ್ಟಿ ಅವರನ್ನು ಪಕ್ಷದ ವಿರುದ್ಧ ಮಾತನಾಡಿದರು ಎಂದು ಇತ್ತೀಚೆಗೆ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅಮಾನತು ಮಾಡಿದ್ದರು.
ಕ್ಷುಲ್ಲಕ ಕಾರಣಕ್ಕೆ ಅವರನ್ನು ಅಮಾನತುಗೊಳಿಸಿದ್ದು, ಅದನ್ನು ಹಿಂಪಡೆಯಬೇಕು ಎಂದು ನಾಗರಾಜ ಶೆಟ್ಟಿ ಮತ್ತು ಎಂ.ಜಿ. ಹೆಗಡೆ ಆಗ್ರಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.