'ನಾಯಕರನ್ನು ಘೋಷಿಸಿದರೆ ಕಾಂಗ್ರೆಸ್ ಹೋಳು'
ಚಾಮರಾಜನಗರ: ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಎಂದು ಘೋಷಿಸಿದ್ದು, ಇದರ ಮೂಲಕ ಚುನಾವಣೆಗೆ ಹೋಗುತ್ತಿದ್ದೇವೆ. ಆದರೆ ಕಾಂಗ್ರೆಸ್ಗೆ ಆ ತಾಕತ್ತು ಇಲ್ಲ. ಯಾರಾದರೂ ಒಬ್ಬರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಕೊಂಡು ಹೊರಟರೆ ಆ ದಿನವೇ ಕಾಂಗ್ರೆಸ್ ಹೋಳಾಗುತ್ತದೆ ಎಂದು ಉಪಮುಖ್ಯಮಂತ್ರಿ ಆರ್.ಅಶೋಕ ಹೇಳಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ನಡೆದ ಜಿಲ್ಲಾ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರನ್ನು ಘೋಷಿಸಿದರೆ ಒಂದು ಗುಂಪು, ಸಿದ್ದರಾಮಯ್ಯ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಿದರೆ ಮತ್ತೊಂದು ಗುಂಪು ಹೊರ ಹೋಗುತ್ತದೆ ಎಂದು ಟೀಕಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.