ಪಕ್ಷೇತರರಾಗಿ ಹಾಲಾಡಿ ಸ್ಪರ್ಧೆ
ಉಡುಪಿ: ಮಂತ್ರಿಯಾಗುವ ಅವಕಾಶದಿಂದ ಅಂತಿಮ ಕ್ಷಣದಲ್ಲಿ ವಂಚಿತರಾದ ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕೊನೆಗೂ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಅವರ ಮಾತೃಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ಗಳೆರಡೂ ಆತಂಕಗೊಳ್ಳುವಂತೆ ಮಾಡಿದ್ದಾರೆ.
ಮೂರು ತಿಂಗಳ ಮೌನ: ಮುಂದಿನ ನಡೆ ಬಗ್ಗೆ ಸುಮಾರು 3 ತಿಂಗಳ ಕಾಲ ಮೌನ ಕಾಪಾಡಿದ ಹಾಲಾಡಿ, ಇದೀಗ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಇರಾದೆಯನ್ನು ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಹಾಲಾಡಿ ಸ್ವಂತ ವರ್ಚಸ್ಸಿನಿಂದಲೇ ಗೆದ್ದು ಬಂದವರು. ಕುಂದಾಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅವರು 3 ಬಾರಿ ಆಯ್ಕೆಯಾಗಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.