ಬಿಎಸ್ಆರ್ ಕಾಂಗ್ರೆಸ್ ಚುನಾವಣಾ ಸಮಿತಿ ರಚನೆ
ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಎಸ್ಆರ್ ಕಾಂಗ್ರೆಸ್ ಶುಕ್ರವಾರ ಚುನಾವಣಾ ಸಮಿತಿ ರಚಿಸಿದೆ. ಮಾಜಿ ಸಂಸದ ವಿರೂಪಾಕ್ಷಪ್ಪ ಸಮಿತಿ ಅಧ್ಯಕ್ಷರಾಗಿದ್ದು, ವಿವಿಧ ಜಿಲ್ಲೆಗಳ 9 ಮುಖಂಡರನ್ನು ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. ಸೋಮಶೇಖರ್ ರೆಡ್ಡಿ, ಸೀರಾಜ್ ಶೇಖ್, ಶಿವಪುತ್ರಪ್ಪ ದೇಸಾಯಿ, ಶಿವಪ್ಪ, ವೈ.ಎನ್.ಗೌಡರ್, ರೇಣುಕಾಪ್ರಸಾದ್, ಖಲೀದ್ ಅಹಮ್ಮದ್, ಅಲಂ ಚನ್ನಪ್ಪ, ಜಿಗಣಿ ಶಂಕರ್, ಮದನ್ ಪಟೇಲ್ ಸದಸ್ಯರಾಗಿದ್ದಾರೆಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರೇಣುಕಾಪ್ರಸಾದ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.