ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಬೆಳಗಾವಿ ಉತ್ತರಕ್ಕೆ ಮುತಾಲಿಕ್ ಬಿಜೆಪಿ ಅಭ್ಯರ್ಥಿ?

Parashurama
Updated On : 23 Mar 2013, 12:11 pm

ಬೆಳಗಾವಿ: ಪ್ರಖರ ಹಿಂದುತ್ವವಾದಿ, ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಚುನಾವಣಾ ರಾಜಕಾರಣಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಬೆಳಗಾವಿ ಉತ್ತರ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ. ಈ ಕುರಿತಂತೆ ಬಿಜೆಪಿ ನಾಯಕರು ತಮಗೆ ಆಹ್ವಾನ ನೀಡಿದ್ದನ್ನು ಮುತಾಲಿಕ ಖಚಿತಪಡಿಸಿದ್ದಾರೆ. ಬೆಳಗಾವಿ ಮಹಾನಗರ ವ್ಯಾಪ್ತಿಯ ಮೂರು ವಿಧಾನಸಭೆ ಕ್ಷೇತ್ರಗಳ ಪೈಕಿ 2ನ್ನು ತನ್ನ ಮಡಿಲಿಗೆ ಹಾಕಿಕೊಂಡಿರುವ ಬಿಜೆಪಿಗೆ ಬೆಳಗಾವಿ ಉತ್ತರ ಕ್ಷೇತ್ರ ಇನ್ನೂ ತನಕ ಕಬ್ಬಿಣದ ಕಡಲೆಯಾಗಿದ್ದು, ಅಲ್ಲಿ ಪಕ್ಷಕ್ಕೆ ಪ್ರಬಲ ಅಭ್ಯರ್ಥಿ ಸಹ ಇಲ್ಲದಿರುವುದರಿಂದ ಮುತಾಲಿಕ ಅವರನ್ನು ಕಣಕ್ಕಿಳಿಸುವ ಆಲೋಚನೆ ಮಾಡಿದೆ. ಕಳೆದ 15 ದಿನಗಳಿಂದ ಮಾಜಿ ಸಚಿವ ಎ.ಬಿ. ಪಾಟೀಲ ಅವರನ್ನು ಪಕ್ಷಕ್ಕೆ ಕರೆತಂದು ಅವರಿಗೆ ಇಲ್ಲಿಂದ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂಬ ಚಿಂತನೆ ಇತ್ತಾದರೂ ಇದಕ್ಕೆ ಜಿಲ್ಲೆಯ ಪ್ರಬಲ ರಾಜಕಾರಣಿಯೊಬ್ಬರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಕೈಬಿಡಲಾಗಿದ್ದು, ಮುತಾಲಿಕ ಅವರನ್ನು ಕಣಕ್ಕಿಳಿಸುವ ಆಲೋಚನೆ ಮಾಡುತ್ತಿದೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments