ಮದ್ದೂರಿಂದ ಜೆಡಿಎಸ್ ಪ್ರಚಾರ: ದೇವೇಗೌಡ
ಕ.ಪ್ರ. ವಾರ್ತೆ ಮದ್ದೂರು ಮಾ.22
ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕಾರ್ಯವನ್ನು ಮದ್ದೂರು ಕ್ಷೇತ್ರದಿಂದ ಪ್ರಾರಂಭಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.
ಶುಕ್ರವಾರ ಪಟ್ಟಣದ ಹೊರವಲಯದ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಳೆಯ ಮೈಸೂರು ಭಾಗದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಬಯಸಿದ್ದೇನೆ. ಚುನಾವಣಾ ಪ್ರಚಾರ ಕಾರ್ಯವನ್ನು ಮದ್ದೂರು ಕ್ಷೇತ್ರದಿಂದಲೇ ಆರಂಭಿಸಸಲಾಗುವುದು. ಟಿಕೆಟ್ ಹಂಚಿಕೆ ಮತ್ತು ಪ್ರಚಾರ ಕಾರ್ಯಗಳಲ್ಲಿ ನಾನು ಹಸ್ತಕ್ಷೇಪ ಮಾಡಿಲ್ಲ. ಅದೆಲ್ಲವನ್ನು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ವಿವೇಚನೆಗೆ ಬಿಡಲಾಗಿದೆ ಎಂದರು.
ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿವೆ. ಇಂಥ ಸಂದರ್ಭ ಜೆಡಿಎಸ್ ಪಕ್ಷಕ್ಕೆ ಒಂದೊಂದು ಕ್ಷೇತ್ರದ ಗೆಲವು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಬದಲಾವಣೆ ಅನಿವಾರ್ಯವಾಗಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಟಿಕೆಟ್ ಆಕಾಂಕ್ಷಿತರು ಹಾಗೂ ಕಾರ್ಯಕರ್ತರು ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ ಕೆಲಸ ಮಾಡಬೇಕು ಎಂದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.