ಕಿಕ್‌ಬ್ಯಾಕ್ ಆರೋಪ; ಬಿಎಸ್‌ವೈ ಕುಟುಂಬ ನ್ಯಾಯಾಲಯಕ್ಕೆ
ಕ.ಪ್ರ. ವಾರ್ತೆ ಬೆಂಗಳೂರು ಮಾ.23
ಗಣಿ ಕಂಪನಿಗಳಿಂದ ಕಿಕ್‌ಬ್ಯಾಕ್ ಪಡೆದ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಕುಟುಂಬ ಸದಸ್ಯರು ಶನಿವಾರ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು.
ಯಡಿಯೂರಪ್ಪ ಅವರೊಂದಿಗೆ ಪುತ್ರರಾದ ಬಿ.ವೈ. ರಾಘವೇಂದ್ರ, ವಿಜಯೇಂದ್ರ, ಅಳಿಯ ಸೋಹನ್ ಕುಮಾರ್, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ಬಳ್ಳಾರಿ ಮೂಲದ ಗಣಿ ಕಂಪನಿಗಳ ಅಧಿಕಾರಿಗಳು ಸಿಬಿಐ ನ್ಯಾಯಾಲಯದ ಮುಂದೆ ಹಾಜರಾದರು. ಹಾಜರಾಗುವಂತೆ ಆರೋಪಿಗಳಿಗೆ ಜ.29ರಂದು ನ್ಯಾಯಾಲಯ ಸೂಚಿಸಿತ್ತು. ಇದೇ ವೇಳೆ ನ್ಯಾಯಾಲಯದ ಮುಂದೆ ತಮ್ಮ ಹೇಳಿಕೆ ನೀಡಲು ಇನ್ನಷ್ಟು ಕಾಲಾವಕಾಶ ನೀಡುವಂತೆ ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಅಭಿಯೋಜಕ ಸುದರ್ಶನ, ನ್ಯಾಯಾಲಯ ನಿಗದಿಪಡಿಸಿದ ದಿನದಂತೆ ಹಾಜರಾಗಿ ಹೇಳಿಕೆ ನೀಡಬೇಕೆಂದು ವಾದಿಸಿದ್ದರು. ಬಿಎಸ್‌ವೈ ಕುಟುಂಬ ಸದಸ್ಯರ ಒಡೆತನದ ಪ್ರೇರಣಾ ಟ್ರಸ್ಟ್‌ಗೆ ಗಣಿ ಕಂಪನಿಗಳಿಂದ ಅಕ್ರಮವಾಗಿ ಹಣ ವರ್ಗಾವಣೆಯಾಗಿರುವ ಸಂಬಂಧ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣ ಎಲ್ಲಾ ಆರೋಪಿಗಳಿಗೆ ನ್ಯಾಯಾಲಯ ಷರತ್ತಿನ ಜಾಮೀನು ನೀಡಿದೆ. ಪ್ರಕರಣದ ವಿಚಾರಣೆಯನ್ನು ಮೇ.15ಕ್ಕೆ ಮುಂದೂಡಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.