ತಾಕತ್ತಿದ್ದರೆ ಜೋಶಿ ಗೆದ್ದು ತೋರಿಸಲಿ
ಕಾರವಾರ: ತಾಕತ್ತಿದ್ದರೆ ಇದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲವು ಸಾಧಿಸಲಿ ಎಂದು ಕೆಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯಕುಮಾರ್ ಸವಾಲು ಹಾಕಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಹ್ಲಾದ್ ಜೋಶಿ ಅವರು ಅನಂತಕುಮಾರ್ ಅವರ ಡಮ್ಮಿ ಅಭ್ಯರ್ಥಿ. ಅವರಿಗೆ ಸ್ವಂತಿಕೆ ಇಲ್ಲ. ಹಣದ ವಿಷಯಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದ ಅಧ್ಯಕ್ಷ ಯಡಿಯೂರಪ್ಪ ಮತ್ತಿತರ ಮೇಲೆ ಆರೋಪ ಹೊರಿಸುವ ಜೋಶಿ, ಅನಂತಕುಮಾರ್ ಅವರ ಬಳಿ ಹಣ ಇರುವ ಬಗ್ಗೆ ಮಾತನಾಡುತ್ತಿಲ್ಲ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.