ನಾಳೆಯಿಂದ 'ಕೈ' ಅಭ್ಯರ್ಥಿ ಆಯ್ಕೆ ಸಭೆ
ಬೆಂಗಳೂರು: ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚುನಾವಣಾ ಪರಿಶೀಲನಾ ಸಮಿತಿ ಸಭೆ ಮಾ. 25ರಿಂದ 27ರ ವರೆಗೆ ದೆಹಲಿಯಲ್ಲಿ ನಡೆಯಲಿದೆ. ಸಮಿತಿ ಅಧ್ಯಕ್ಷರು ಹಾಗೂ ಗೋವಾ ರಾಜ್ಯದ ಮಾಜಿ ಮುಖ್ಯಮಂತ್ರಿ ಲೋಸಿಯಾ ಪೆರಾರಿಯೋ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಸಚಿವರಾದ ಜಿತೇಂದ್ರ ಸಿಂಗ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ಮಧುಸೂದನ್ ಮಿಸ್ತ್ರಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚಿಸಿ ಅಂತಿಮ ಪಟ್ಟಿ ತಯಾರಿಸಲಾಗುವುದು. ನಂತರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಒಪ್ಪಿಗೆ ಪಡೆದು ಏಪ್ರೀಲ್ ಮೊದಲ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.