ಬಿಜೆಪಿ ಅಭ್ಯರ್ಥಿಗಳು ಅಖೈರು
ಬೆಂಗಳೂರು: ನೂತನ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅಧ್ಯಕ್ಷತೆಯಲ್ಲಿ ಶನಿವಾರ ಸಭೆ ಸೇರಿದ್ದ ರಾಜ್ಯ ಬಿಜೆಪಿ ಕೋರ್ ಕಮಿಟಿ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಹುಪಾಲು ಅಖೈರುಗೊಳಿಸಿದೆ. ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ಕುಮಾರ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ ಭಾಗವಹಿಸಿದ್ದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಹಾಲಿ ಶಾಸಕರೆಲ್ಲರಿಗೂ ಮತ್ತೆ ಟಿಕೆಟ್ ನೀಡುವುದಕ್ಕೆ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಜತೆಗೆ ಬೇರೆ ಪಕ್ಷಗಳ ಸಂಭಾವ್ಯ ಅಭ್ಯರ್ಥಿಗಳ ಹೆಸರಿನ ಆಧಾರದ ಮೇಲೆ ಉಮೇದುವಾರರನ್ನು ಆಯ್ಕೆ ಮಾಡಲಾಗಿದ್ದು, ಕೇಂದ್ರ ಸಮಿತಿಗೆ ಪಟ್ಟಿಯನ್ನು ಕಳುಹಿಸಿಕೊಡಲು ನಿರ್ಧರಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.