ಮುತಾಲಿಕ ಸ್ಪರ್ಧೆಗೆ ಬಿಜೆಪಿಯಲ್ಲೇ ವಿರೋಧ
ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರದಿಂದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಅವರು ಸ್ಪರ್ಧಿಸುವ ವಿಚಾರಕ್ಕೆ ಬಿಜೆಪಿ ಮಹಾನಗರ ಘಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಶನಿವಾರ ನಡೆದ ಈ ಕ್ಷೇತ್ರದ ಪದಾಧಿಕಾರಿಗಳು ಹಾಗೂ ಸ್ಪರ್ಧಾ ಆಕಾಂಕ್ಷಿಗಳ ಸಭೆಯಲ್ಲಿ ಹೊರಗಿನರ ಸ್ಪರ್ಧೆ ವಿರೋಧಿಸಿ ಗೊತ್ತುವಳಿಯನ್ನೂ ಸಹ ಸ್ವೀಕರಿಸಲಾಗಿದೆ. ಸಭೆಯಲ್ಲಿ ಎಲ್ಲಿಯೂ ಪ್ರಮೋದ್ ಮುತಾಲಿಕ ಸ್ಪರ್ಧೆಯ ವಿಚಾರ ನೇರವಾಗಿ ಪ್ರಸ್ತಾಪಕ್ಕೆ ಬಾರದೇ ಇದ್ದರೂ ಎಲ್ಲರ ಗುರಿ ಮಾತ್ರ ಒಂದೇ ಆಗಿತ್ತು. ಪಕ್ಷದ ಮೂಲ ಕಾರ್ಯಕರ್ತರನ್ನೇ ಕಣಕ್ಕಿಳಿಸಬೇಕು. ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಬಾರದು ಎಂಬುದು ಒತ್ತಾಯವಾಗಿತ್ತು. ವಿಶೇಷವೆಂದರೆ ಸಭೆಯಲ್ಲಿದ್ದ ಬಹುತೇಕ ಸ್ಪರ್ಧಾಕಾಂಕ್ಷಿಗಳು ತಮ್ಮಲ್ಲಿ ಯಾರಿಗೇ ಟಿಕೆಟ್ ನೀಡಿದರೂ ಸಂಘಟಿತವಾಗಿ ಹೋರಾಡಿ ಅವರನ್ನು ಗೆಲ್ಲಿಸುವುದಾಗಿ ಹೇಳಿದರು. ಅಲ್ಲದೆ, ಪ್ರಮೋದ ಮುತಾಲಿಕ ಸ್ಪರ್ಧೆಗೆ ತಮ್ಮ ತೀವ್ರ ವಿರೋಧವಿದೆ. ಇದನ್ನು ಪಕ್ಷದ ವರಿಷ್ಠರ ಗಮನಕ್ಕೂ ತರಲಾಗಿದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.