ಸುನೀತಾ ಮಲ್ಲಿಕಾರ್ಜುನ್ಗೆ ಕೆಜೆಪಿ ಟಿಕೆಟ್ ಕಷ್ಟ?
ಚಿತ್ರದುರ್ಗ: ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ಕರ್ನಾಟಕ ಜನತಾ ಪಕ್ಷದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದ ನಗರಸಭೆ ಮಾಜಿ ಅಧ್ಯಕ್ಷೆ ಸುನಿತಾ ಮಲ್ಲಿಕಾರ್ಜುನ ಪಕ್ಷದ ಟಿಕೆಟ್ನಿಂದ ವಂಚಿತರಾಗುವರೇ...? ಇಂತಹ ಒಂದು ಜಿಜ್ಞಾಸೆಗೆ ಎಡೆ ಮಾಡಿಕೊಟ್ಟದ್ದು ಶನಿವಾರ ಚಿತ್ರದುರ್ಗದಲ್ಲಿ ನಡೆದ ಪಕ್ಷದ ಜಿಲ್ಲಾಧ್ಯಕ್ಷ ಪಿ. ರಮೇಶ್ ಅವರ ಸುದ್ದಿಗೋಷ್ಠಿ. ಅವರು ಹೇಳಿದ್ದು ಇಷ್ಟು, ಚಿತ್ರದುರ್ಗ ಕ್ಷೇತ್ರಕ್ಕೆ ಬಹಳಷ್ಟು ಜನ ಆಕಾಂಕ್ಷಿಗಳಿದ್ದಾರೆ. ಜಿಲ್ಲಾ ಸಮಿತಿಯಿಂದ ನಾವು ಯಾರ ಹೆಸರನ್ನೂ ಶಿಫಾರಸು ಮಾಡಿಲ್ಲ. ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಅವರ ಪುತ್ರ ಅನಿತ್ ಸಿದ್ದೇಶ್ವರ್ಗೆ ಟಿಕೆಟ್ ನೀಡಲು ಅವರ ಮನವೊಲಿಸಲಾಗುತ್ತಿದೆ ಎಂದು ಹೇಳಿದರು. ರಮೇಶ್ ಅವರ ಮಾತಿನ ಧಾಟಿ ಗಮನಿಸಿದರೆ ಸುನಿತಾ ಬದಲಿಗೆ ಬೇರೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಎಲ್ಲಾ ಪ್ರಯತ್ನಗಳೂ ಪಕ್ಷದಲ್ಲಿ ನಡೆದಂತಿದೆ. ಹಾಗಾದರೆ ಸುನಿತಾ ಮಲ್ಲಿಕಾರ್ಜುನ್ಗೆ ಟಿಕೆಟ್ ನೀಡುವುದಿಲ್ಲವೇ ಎಂಬ ಪ್ರಶ್ನೆಗೆ, ಹಾಗಂತ ಯಾರು ಹೇಳಿದರು. ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬುದು ಎಲ್ಲರ ಉದ್ದೇಶ ಎಂದಷ್ಟೇ ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.