ಹಾಸನದಲ್ಲಿ ಕೆಜೆಪಿ ಟಿಕೆಟ್ ಕೇಳೋರಿಲ್ಲ!
ಹಾಸನ: ಬಿಜೆಪಿಯಿಂದ ಸಿಡಿದು ಬಂದು ಕೆಜೆಪಿ ಸ್ಥಾಪಿಸಿದ ಬಿ.ಎಸ್.ಯಡಿಯೂರಪ್ಪ ಅವರು ಹಾಸನ ಜಿಲ್ಲೆಯಲ್ಲಿ ಜೆಡಿಎಸ್ಗೆ ಪ್ರಬಲ ಪೈಪೋಟಿ ನೀಡಿಯೇ ತೀರುವುದಾಗಿ ಶಪಥ ಮಾಡಿದ್ದರು. ಮಾತ್ರವಲ್ಲ, ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟಿಸಲು ಇನ್ನಿಲ್ಲದ ಶ್ರಮ ಹಾಕಿದ್ದರು. ಆದರೆ, ಜಿಲ್ಲೆಯಲ್ಲಿ ಬೇಲೂರು ಮತ್ತು ಅರಸೀಕೆರೆ ಕ್ಷೇತ್ರ ಬಿಟ್ಟರೆ ಕೆಜೆಪಿಯಿಂದ ಬೇರೆ ಯಾವ ಕ್ಷೇತ್ರದಲ್ಲೂ ಟಿಕೆಟ್ ಪಡೆಯಲು ಪೈಪೋಟಿ ಕಂಡು ಬಂದಿಲ್ಲ. ಬೇಲೂರಿನಿದ ಇತ್ತೀಚೆಗೆ ಜೆಡಿಎಸ್ನಿಂದ ವಲಸೆ ಬಂದ ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಹಾಗೂ ಶಿವರುದ್ರಪ್ಪ ಟಿಕೆಟ್ ಪಡೆಯಲು ಬೆಂಗಳೂರಿನಲ್ಲಿ ಮೊಕ್ಕಾಂ ಹೂಡಿ ಕೆಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಅದು ಬಿಟ್ಟರೆ, ಅರಸೀಕೆರೆ ಕ್ಷೇತ್ರದಿಂದ ಡಾ.ಲೋಕೇಶ್ ಸ್ಪರ್ಧಿಸಲು ಮುಂದಾಗಿದ್ದಾರೆ. ಆದರೆ ಇಲ್ಲಿ ಕಾಂಗ್ರೆಸ್ ಹಾಗೂ ಕೆಜೆಪಿ ನಡುವೆ ಒಳ ಒಪ್ಪಂದ ಏರ್ಪಡುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಕೆಜೆಪಿಯಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಿಲ್ಲ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.