'ಹೊರೆ' ಇಳಿಸಲು ನಿಂಗಪ್ಪ ಸಜ್ಜು?
ತುಮಕೂರು: ಜೆಡಿಎಸ್ ಮೂಲ ನಿವಾಸಿ, ಪಕ್ಷದ ಶಿಸ್ತಿನ ಸಿಪಾಯಿ, ಮಾಜಿ ಶಾಸಕ ಎಚ್. ನಿಂಗಪ್ಪ ಪಕ್ಷಕ್ಕೆ ವಿದಾಯ ಹೇಳುವ ಹಾದಿಯಲ್ಲಿ ಸಾಗಿದ್ದಾರೆ. ಸಹಸ್ರಾರು ಬೆಂಬಲಿಗರೊಂದಿಗೆ ವಿಷಾದದ ಮಾತುಗಳೊಂದಿಗೆ ತುಮಕೂರಿನ ಸಿದ್ದಿವಿನಾಯಕ ಸಭಾಂಗಣದಲ್ಲಿ ನಿಂಗಪ್ಪ ಶನಿವಾರ ಸಭೆ ನಡೆಸಿದರು. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಟಿಕೆಟ್ಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ್ದು, ಇಬ್ಬರೂ ನಾಯಕರು ಟಿಕೆಟ್ ನೀಡಲ್ಲ ಎಂದರು. ಈ ನಿಟ್ಟಿನಲ್ಲಿ ಮಾತೃ ಸ್ಥಾನದಲ್ಲಿರುವ ಜೆಡಿಎಸ್ ತೊರೆಯಲು ಅತೀವ ಸಂಕಟವಾಗುತ್ತಿದೆ. ಉತ್ತಮ ಸ್ಥಾನ-ಮಾನ ನೀಡುವ ಪಕ್ಷಕ್ಕೆ ಸೇರುವುದಾಗಿ ನಿಂಗಪ್ಪ ಘೋಷಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.