ರಾಜಕೀಯ

ಬಿಎಸ್‌ವೈ ಬಿಜೆಪಿಗೆ ಬರ್ತಾರೆ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿಗೆ ಬಂದೇ ಬರುತ್ತಾರೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಬೆಳೆಸಿದ ಯಡಿಯೂರಪ್ಪ ಅವರ ಅವಶ್ಯಕತೆ ಈಗ ಪಕ್ಷದ ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರಿಗೂ ಅರಿವಾಗಿದೆ. ಯಡಿಯೂರಪ್ಪ ಅವರು ಪಕ್ಷಕ್ಕೆ ಮರಳುವ ಬಗ್ಗೆ ಎಲ್ಲರಲ್ಲೂ ಸಹಮತ ವ್ಯಕ್ತವಾಗಿದ್ದು, ಹೀಗಾಗಿ ಅವರು ಪಕ್ಷಕ್ಕೆ ಮತ್ತೆ ಮರಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.  ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರುವ ಅಗತ್ಯವಿರುವ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿಯನ್ನು ತೊರೆದು ಹೋಗಿರುವ ಇನ್ನಿತರ ಮುಖಂಡರನ್ನು ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಜೆಡಿಎಸ್‌ಗೆ ಸೇರ್ಪಡೆಯಾಗಿರುವ ಮಾಜಿ ಸಂಸದ ಬಸನಗೌಡ ಪಾಟೀಲ ಯತ್ನಾಳ, ಬಾಗಲಕೋಟೆ ಕ್ಷೇತ್ರದ ಮಾಜಿ ಶಾಸಕ ಪಿ.ಎಚ್. ಪೂಜಾರ ಸೇರಿದಂತೆ ಇನ್ನಿತರರೊಂದಿಗೆ ಖುದ್ದಾಗಿ ಚರ್ಚಿಸಿದ್ದೇನೆ. ಪಕ್ಷಕ್ಕೆ ಮರಳುವ ಕುರಿತು ಇನ್ನೆರಡು ದಿನಗಳಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತೇನೆ ಎಂದು ಯತ್ನಾಳ್ ಭರವಸೆ ನೀಡಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!