ಸಿದ್ಧರಾಮಯ್ಯ 
ರಾಜಕೀಯ

ಅಧಿವೇಶನ ಮರುದಿನವೇ ಕೈ ಸಮಾವೇಶ

ವಿಧಾನ ಮಂಡಲ ಅಧಿವೇಶನದ ಮರುದಿನವೇ ಬೆಳಗಾವಿಯಲ್ಲಿ ಬೃಹತ್ ಸಮಾವೇಶ ಆಯೋಜಿಸುವ ಮೂಲಕ ಬಿಜೆಪಿಗೆ ಸಡ್ಡು...

ಬೆಂಗಳೂರು: ವಿಧಾನ ಮಂಡಲ ಅಧಿವೇಶನದ ಮರುದಿನವೇ ಬೆಳಗಾವಿಯಲ್ಲಿ ಬೃಹತ್ ಸಮಾವೇಶ ಆಯೋಜಿಸುವ ಮೂಲಕ ಬಿಜೆಪಿಗೆ ಸಡ್ಡು ಹೊಡೆಯಲು ಕಾಂಗ್ರೆಸ್ ಮುಂದಾಗಿದೆ.

ಹಠಾತ್ ಬೆಳವಣಿಗೆಯೊಂದರಲ್ಲಿ ಸಿಎಂ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಈ ನಿರ್ಧಾರ ತೆಗೆದುಕೊಂಡಿದ್ದು, ಡಿ. 21 ರಂದು ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲಾಗಿದೆ. ಇಬ್ಬರಲ್ಲಿ ಒಬ್ಬರು ಭಾಗವಹಿಸುವ ಭರವಸೆ ನೀಡಿದ್ದಾರೆ. ಅಷ್ಟು ಮಾತ್ರವಲ್ಲ ಕಾಂಗ್ರೆಸ್‌ನ ರಾಷ್ಟ್ರೀಯ ಮುಖಂಡರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ರಾಜ್ಯ ಸರ್ಕಾರದ ವಿರುದ್ಧ ಕಳೆದ ಕೆಲವು ದಿನಗಳಿಂದ  ಬಿಜೆಪಿ ನಡೆಸುತ್ತಿರುವ ನಿರಂತರ ದಾಳಿಗೆ ಎದಿರೇಟು ನೀಡಲು ಹಾಗೂ ಬೆಳಗಾವಿ ಅಧಿವೇಶನವನ್ನು ತಮ್ಮ ಶಕ್ತಿ ಪ್ರದರ್ಶನಕ್ಕೆ ಬಳಸಿಕೊಳ್ಳುವುದಕ್ಕೆ ಈ ಸಮಾವೇಶದ ಮೂಲಕ ಪ್ರತಿದಾಳಿ ನಡೆಸುವುದು  ರಾಜ್ಯ ಕಾಂಗ್ರೆಸ್‌ನ ತಂತ್ರ. ಇವೆಲ್ಲಕ್ಕಿಂತ ಮುಖ್ಯವಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ವಿಭಾಗೀಯ ಸಮಾವೇಶಗಳು ನಡೆದಿಲ್ಲ. ಈ ಬಗ್ಗೆ ಹೈಕಮಾಂಡ್ ತುಸು ಅಸಮಾಧಾನವನ್ನೂ ವ್ಯಕ್ತ ಪಡಿಸಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಯಾರಿ ನಡೆಸಲು ಮತ್ತು ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸವು ಉದ್ದೇಶ ಇದರ ಹಿಂದಿದೆ.

ಬೆಳಗಾವಿ ಅಧಿವೇಶನದಲ್ಲಿ  3 ವಿಧೇಯಕ
ಕರ್ನಾಟಕ ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಸೇರಿದಂತೆ 3 ಪ್ರಮುಖ ವಿಧೇಯಕಗಳು ಬೆಳಗಾವಿ ಅಧಿವೇಶನದಲ್ಲಿ ಮಂಡನೆಯಾಗಲಿದೆ ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ಹೇಳಿದ್ದಾರೆ. ಪರಿಷತ್ ಕಲಾಪ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪಂಚಾಯತ್ ರಾಜ್ ಕಾಯ್ದೆ, ಸಾರಿಗೆ ಇಲಾಖೆಯ ಎಸ್ಮಾ ಕಾಯ್ದೆ, ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಗಳು ಪರಿಷತ್‌ನಲ್ಲಿ ಮಂಡನೆಯಾಗಲಿದೆ. 1352 ಪ್ರಶ್ನೆ ಕೇಳಲು ಸೂಚನೆ ಬಂದಿದೆ. ಅದರಲ್ಲಿ 1115  ಚುಕ್ಕೆ ಗುರುತಿನ ಪ್ರಶ್ನೆಗಳಾಗಿವೆ. 113 ನಿಲುವಳಿ ಸೂಚನೆ, ನಿಯಮ 330ರ ಅನ್ವಯ ಚರ್ಚೆ ನಡೆಸುವುದಕ್ಕೆ 77 ಸೂಚನೆ ಬಂದಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡುವುದಿಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!